ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ಅವರಿಂದ ಹೃದಯಾಘಾತದಿಂದ ಸಾವು ಸಂಭವಿಸುತ್ತಿರುವ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ಸೂಚನೆ.

01 Jul 2025
ರಾಜ್ಯ

ಹಾಸನ: ಜೂ30. ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಯುವ ಜನತೆಯಲ್ಲಿ ಆಧುನಿಕ ಜೀವನ ಶೈಲಿಯಿಂದ, ಮಧ್ಯ ಮತ್ತು ಮಾದಕ ವಸ್ತುಗಳ ಸೇವನೆಯಿಂದ ಹೃದಯಘಾತಗಳು ಸಂಭವಿಸುವ ಅವಕಾಶಗಳು ಹೆಚ್ಚಾಗಿವೆ ಇದರ ಕುರಿತು ಶಾಲಾ , ಕಾಲೇಜುಗಳು, ವಿಶ್ವವಿದ್ಯಾಲಯ ಹಾಗೂ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ಅಧಿಕಾರಿಗಳಿಗೆ.

ಲತಾ ಕುಮಾರಿ ಅವರು ಸೂಚಿಸಿದ್ದಾರೆ.



ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಜಿಲ್ಲೆಯಲ್ಲಿ ಇತ್ತೀಚೆಗೆ ಹೃದಯಾಘಾತದಿಂದ ಸಾವು ಸಂಭವಿಸುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿ ಆಗುತ್ತಿರುವ ಹಿನ್ನೆಲೆಯಲ್ಲಿ ಸಭೆ ನಡೆಸಿ ಮಾತನಾಡಿದ ಅವರು ಅತಿ ಚಿಕ್ಕ ವಯಸ್ಸಿನಲ್ಲೇ ಹೃದಯಾಘಾತಕ್ಕೆ ಕಾರಣವೇನು ಎಂಬುದರ ಬಗ್ಗೆ ಗಮನಹರಿಸಿ ಪರಿಶೀಲನೆ ಮಾಡಿ ಎಂದು ವೈದ್ಯರುಗಳಿಗೆ ಸೂಚಿಸಿದರು.


ಜೀವನ ಶೈಲಿಯನ್ನು ಬದಲಾವಣೆ ಮಾಡಿಕೊಳ್ಳುವಂತೆ ಜಾಗೃತಿ ಮೂಡಿಸುವುದರ ಜೊತೆಗೆ ಆಹಾರ ಸೇವನೆ, ಜೀವನ ಶೈಲಿಯಲ್ಲಿ ಬದಲಾವಣೆ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಯುವಜನತೆಗೆ ಮನವರಿಕೆ ಮಾಡುವಂತೆ ತಿಳಿಸಿದರು.


ಹೃದಯಾಘಾತ ಸಂಭವಿಸಿ ಆಸ್ಪತ್ರೆಗೆ ಆಗಮಿಸಿದ ಸಂದರ್ಭದಲ್ಲಿ ತುರ್ತಾಗಿ ಎಚ್ಚರಿಕೆವಹಿಸಿ ತಕ್ಷಣ ಚಿಕಿತ್ಸೆ ನೀಡಿ ಜೀವ ಉಳಿಸಲು ಎಲ್ಲಾ ತಾಲ್ಲೂಕುಗಳಲ್ಲಿರುವ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳಿರುವಂತೆ ನೋಡಿಕೊಳ್ಳಲು ತಿಳಿಸಿದರಲ್ಲದೆ, ಖಾಸಗಿ ಆಸ್ಪತ್ರೆಗಳಲ್ಲಿಯೂ ಔಷಧಿಗಳು ಲಭ್ಯವಿರುವಂತೆ ನೋಡಿಕೊಳ್ಳಲು ವೈದ್ಯರಿಗೆ ಮಾಹಿತಿ ನೀಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.


ಆಕಸ್ಮಿಕ ಸಾವು ಸಂಭವಿಸಿದಾಗ ಸರ್ಕಾರದ ಮಾರ್ಗಸೂಚಿ ಅನ್ವಯ (ಪೋಸ್ಟ್ ಮಟಮ್) ಮರಣೋತ್ತರ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿ ಯಾವ ಕಾರಣಕ್ಕೆ ಸಾವು ಸಂಭವಿಸಿದೆ ಎಂಬುದನ್ನು ನಿಖರವಾಗಿ ನಮೂದಿಸಲು ಸೂಚಿಸಿದರು.


ಮೇ.20 ರಿಂದ ಜೂನ್ 20 ವರೆಗೆ ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ದಿಂದ ಸಾವಾಗಿದೆ ಎಂದು ಮಾಧ್ಯಮಗಳಲ್ಲಿ ಸುದ್ದಿಯಾಗಿರುವ 18 ಪ್ರಕರಣಗಳ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ವರದಿ ನೀಡಲು ಒಂದು ತಂಡ ರಚನೆ ಮಾಡಿ ಸಮಗ್ರ ವರದಿ ಪಡೆದು ನೀಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರಿಗೆ ಸೂಚಿಸಿದರು.


ಅತ್ಯಂತ ಗಂಭೀರವಾದ ವಿಷಯ 14 ಜನ ಮನೆಯಲ್ಲಿ, ಇಬ್ಬರು ಆಸ್ಪತ್ರೆಯಲ್ಲಿ ಹಾಗೂ ಇಬ್ಬರು ಕೆಲಸ ಮಾಡುವ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಪ್ರತಿಯೊಬ್ಬರ ಸಾವಿನ ವರದಿ ಬಗ್ಗೆ ಸೂಕ್ಷ್ಮವಾಗಿ ಗಮನಿಸಿ ಪರಿಶೀಲಿಸಿ ವರದಿ ನೀಡುವಂತೆ ನಿರ್ದೇಶನ ನೀಡಿದರು.


30 ವರ್ಷ40 ವರ್ಷ 50 ವರ್ಷ60 ವರ್ಷದೊಳಗಿನವರ ಸಾವಿಗೆ ಕಾರಣವೇನು ಎಂಬುದರ ಬಗ್ಗೆ ಹೆಚ್ಚಿನ ಗಮನಹರಿಸಿ ಸೂಕ್ತ ಮಾಹಿತಿ ನೀಡುವಂತೆ ತಿಳಿಸಿದರು.


ಹಿಮ್ಸ್ ನಿರ್ದೇಶಕರಾದ ಡಾ|| ರಾಜಣ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಅನಿಲ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ|| ನಾಗಪ್ಪ ಮತ್ತಿತರ ವೈದ್ಯರು ಸಭೆಯಲ್ಲಿ ಹಾಜರಿದ್ದರು.


ವರದಿ: ಶಂಕರಗೌಡ ಹುಲಿಕೆರೆ:

Recently Updated:

ಕುಂದಾಪುರದಲ್ಲಿ  ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ  ವೈದ್ಯನ ಅಟ್ಟಹಾಸ.!   ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..ಕುಂದಾಪುರದಲ್ಲಿ ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ ವೈದ್ಯನ ಅಟ್ಟಹಾಸ.! ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..
ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..
ಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್  ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!!  ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್ ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!! ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯ
ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗ
ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ