ಸಿಎಂ ಹಾಗೂ ಗೃಹ ಸಚಿವರ ಕಣ್ಣಂಚಿನಲ್ಲೇ ಇಂಥ ವಿದ್ಯಮಾನ ನಡೆದಿದ್ದರೂ ರಾಜ್ಯ ಪೊಲೀಸರು ಕೈಕಟ್ಟಿ ಕುಳಿತಿದ್ದು ನಾಚಿಕೆಗೇಡಿನ ಸರಕಾರದ ಸ್ಥಿತಿ..! ಹದೆಗೆಟ್ಟ ಕಾನೂನು ಸುವ್ಯವಸ್ಥೆ ರಾಜ್ಯ ಅನಭಿವೃದ್ಧಿಯ ಕೂಪದಲ್ಲಿ ಮುಳುಗುತ್ತಿರುವುದರ ಸಂಕೇತ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕರಾದ ವಿ.ಸುನೀಲ್ ಕುಮಾರ್ ರಾ

09 Jul 2025
ರಾಜ್ಯ

ಬೆಂಗಳೂರು ಜುಲೈ 09: ರಾಜ್ಯದಲ್ಲಿ ನಡೆದ ಎನ್ ಐಎ ದಾಳಿ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ನೌಕರರೇ ಅದರಲ್ಲೂ ವಿಶೇಷವಾಗಿ ಪೊಲೀಸ್ ಇಲಾಖೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಹಾಗೂ ಕಾರಾಗೃಹದ ಸಿಬ್ಬಂದಿಗಳು ಅಂತಾರಾಷ್ಟ್ರೀಯ ಭಯೋತ್ಪಾದಕರ ಜತೆ ಕೈ ಜೋಡಿಸಿ ಸದ್ದಿಲ್ಲದೇ ಉಗ್ರ ಚಟುವಟಿಕೆಗೆ ಪೋಷಣೆ ನೀಡಿದ್ದು ಆತಂಕಕಾರಿಯಷ್ಟೇ ಅಲ್ಲ, ಸರ್ಕಾರದ ' ಟೆರರ್ ಸಾಫ್ಟ್ ಕಾರ್ನರ್' ಧೋರಣೆಯ ಪ್ರತಿಬಿಂಬ ಎಂದು ಆರೋಪಿಸಿದ್ದಾರೆ.


ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಲಷ್ಕರ್ ಉಗ್ರ ಹಾಗೂ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಜುನೈದ್ ಪಾಷಾ ಎಂಬ ಭಯೋತ್ಪಾದಕನಿಗೆ ಗೃಹ ಇಲಾಖೆಯ ಸಿಬ್ಬಂದಿಯೇ ಸಹಕಾರ ಕೊಡುತ್ತಿದ್ದರೂ ರಾಜ್ಯದ ಭಯೋತ್ಪಾದಕ ನಿಗ್ರಹ ದಳ ಕಡಲೆಪುರಿ ತಿನ್ನುತ್ತಿತ್ತೇ ? ಎಂದು ಬಿಜೆಪಿ ಶಾಸಕ ಸುನೀಲ್‌ ಕುಮಾರ್‌ ಅವರು ಪ್ರಶ್ನಿಸಿದ್ದಾರೆ.


ಸಿಎಂ ಹಾಗೂ ಗೃಹ ಸಚಿವರ ಕಣ್ಣಂಚಿನಲ್ಲೇ ಇಂಥ ವಿದ್ಯಮಾನ ನಡೆದಿದ್ದರೂ ರಾಜ್ಯ ಪೊಲೀಸರು ಕೈಕಟ್ಟಿ ಕುಳಿತಿದ್ದು ನಾಚಿಕೆಗೇಡಿನ ಸಂಗತಿ. ಮುಖ್ಯಮಂತ್ರಿ ಖುರ್ಚಿಗಾಗಿ ನಡೆಯುತ್ತಿರುವ ಸಂಗ್ರಾಮದಲ್ಲಿ ರಾಜ್ಯದ ಭವಿಷ್ಯವನ್ನು ಸ್ಫೋಟಗೊಳಿಸಬೇಡಿ. ಕಿಂಚಿತ್ತಾದರೂ ಜವಾಬ್ದಾರಿ ತೋರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಭಯೋತ್ಪಾದಕ ಸಂಘಟನೆಗಳ ಜತೆಗಿನ ನಂಟು, ಹಿಂದು ಕಾರ್ಯಕರ್ತರ ಹತ್ಯೆ ಸೇರಿದಂತೆ ಜಿಹಾದಿಗಳ ಪ್ರತ್ಯಕ್ಷ , ಪರೋಕ್ಷ ಕೈವಾಡವಿರುವ ಪ್ರಕರಣಗಳನ್ನು ಬೇಧಿಸುವುದಕ್ಕೆ ರಾಜ್ಯ ಪೊಲೀಸರಿಗೆ ಏಕೆ ಸಾಧ್ಯವಾಗುತ್ತಿಲ್ಲ ? ಪ್ರತಿ ಬಾರಿಯೂ ಎನ್ ಐಎ ಅಧಿಕಾರಿಗಳು ಈ ಷಡ್ಯಂತ್ರ ಬಯಲಿಗೆಳೆಯುತ್ತಿದ್ದಾರೆ ಎಂದರೆ ಸರ್ಕಾರ ರಾಜ್ಯ ಪೊಲೀಸರ ಕೈ ಕಟ್ಟಿ ಹಾಕಿದೆಯೇ ? ರಾಜ್ಯ ಭಯೋತ್ಪಾದನಾ ನಿಗ್ರಹ ದಳವನ್ನು ಸರ್ಕಾರ ಯಾವ ಕೆಲಸಕ್ಕೆ ಬಳಸಿಕೊಳ್ಳುತ್ತಿದೆ ಎಂದು ಪ್ರಶ್ನಿಸಿದ್ದಾರೆ.


ಬುಡಮೇಲು ಕೃತ್ಯದಲ್ಲಿ ಭಾಗಿಯಾದ ನಕ್ಸಲರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗೃಹ ಕಚೇರಿಯಲ್ಲೇ ಶರಣಾಗತಿ ಪ್ಯಾಕೇಜ್ ನೀಡಿ ನಕ್ಸಲ್ ನಿಗ್ರಹ ಪಡೆಯ ಬಲವನ್ನು ಕಡಿಮೆ ಮಾಡಿದಂತೆ ಭಯೋತ್ಪಾದಕ ನಿಗ್ರಹ ಹಾಗೂ ಆಂತರಿಕ ಭದ್ರತಾ ದಳವನ್ನೂ (ಐಎಸ್ ಡಿ) ಸಿದ್ದರಾಮಯ್ಯನವರು ನಿಷ್ಕ್ರಿಯಗೊಳಿಸಿದ್ದಾರೆಯೇ ? ತಮಗೆ ಮತ ನೀಡಿದ "ಬಾಂಧವರು" ಕುಪಿತಗೊಳ್ಳುತ್ತಾರೆಂಬ ಕಾರಣಕ್ಕೆ " ಬಾಂಬ್ " ಸ್ಫೋಟಿಸುವ ಆರೋಪಿಗಳಿಗೆ ಕಾರಾಗೃಹದಲ್ಲೂ ಸೌಲಭ್ಯ ಒದಗಿಸಲಾಗುತ್ತಿದೆಯೇ ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಹಿಂದು ಕಾರ್ಯಕರ್ತರನ್ನು ಮಟ್ಟ ಹಾಕುವುದಕ್ಕಾಗಿ "ದ್ವೇಷಭಾಷಣ" ಎಂಬಿತ್ಯಾದಿ ಬಾಬರ್ ಕಾಯ್ದೆ ಜಾರಿಗೆ ಹವಣಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಗೃಹ‌ ಇಲಾಖೆಯ ಕಣ್ಣೆದುರೇ ನಡೆಯುವ ಉಗ್ರಕೃತ್ಯ ಕಾಣುವುದಿಲ್ಲವೇ ? ಓಲೈಕೆಗಾಗಿ ರಾಜ್ಯದ ಕಾನೂನು ಸುವ್ಯವಸ್ಥೆಗೆ ಟೈಮ್ ಬಾಂಬ್ ಹಾಕುವ ಪ್ರಯತ್ನಗಳನ್ನು ಮೂಕಪ್ರೇಕ್ಷಕರಂತೆ ನೋಡಬೇಡಿ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕರಾದ ವಿ.ಸುನೀಲ್ ಕುಮಾರ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

Recently Updated:

ಕುಂದಾಪುರದಲ್ಲಿ  ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ  ವೈದ್ಯನ ಅಟ್ಟಹಾಸ.!   ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..ಕುಂದಾಪುರದಲ್ಲಿ ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ ವೈದ್ಯನ ಅಟ್ಟಹಾಸ.! ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..
ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..
ಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್  ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!!  ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್ ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!! ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯ
ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗ
ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ