ಸಿಂಧನೂರು: *ಎಡಿಎಲ್‌ಆರ್ 2 ಎ4 ಸೀಟ್ ಕೇಳಿದ್ದಾರೆಂಬ ಆರೋಪ, ಭಾಜಾ-ಭಜಂತ್ರಿಯೊಂದಿಗೆ ಮೆರವಣಿಗೆಯಲ್ಲಿ ತಹಸಿಲ್ ಕಾರ್ಯಾಲಯಕ್ಕೆ ತಂದ ಕೆಆರ್‌ಎಸ್ ಕಾರ್ಯಕರ್ತರು..!

30 Jan 2025
ರಾಜ್ಯ

ಇದೇನಿದು ಎಂದು ಕಣ್ ಕಣ್ ಬಿಟ್ಟು ನೋಡಿದ ಸಾರ್ವಜನಿಕರು !! ಇಂಥದ್ದೊಂದು ಘಟನೆ ಬುಧವಾರ ಮಧ್ಯಾಹ್ನ ನಡೆದಿದ್ದು, ಸಾರ್ವಜನಿಕರ ಅಚ್ಚರಿಗೆ ಕಾರಣವಾಯಿತು.ಭಾಜಾ-ಭಜಂತ್ರಿ ಬಾರಿಸುತ್ತಾ, ಜಾಂಜ್ ಸಪ್ಪಳ ಮಾಡುತ್ತಾ ಎ4 ಸೀಟ್‌ನ 2 ಬಂಡಲ್‌ಗೆ ಹೂಮಾಲೆ ಹಾಕಿಕೊಂಡು ತಹಸೀಲ್ ಆಫೀಸ್‌ನ ಕಾರ್ಯಾಲಯದ ಆವರಣಕ್ಕೆ ಕರ್ನಾಟಕ ರಾಷ್ಟçಸಮಿತಿ ಪಕ್ಷದ ಕಾರ್ಯಕರ್ತರು ಪ್ರವೇಶಿಸಿದರು.

ʼಎಡಿಎಲ್‌ಆರ್‌ ಸಾಹೇಬರನ್ನು ಕರೆಯಿರಿʼ

“ಎಡಿಎಲ್‌ಆರ್ ಸಾಹೇಬರು ನಮ್ಮ ಪಕ್ಷದ ಕಾರ್ಯಕರ್ತರೊಬ್ಬರು ಸರ್ವೆ ಇಲಾಖೆಯಿಂದ ಜಮೀನಿನ ಪಾರ್ಮ್ ನಂ.10 ಹಾಗೂ ಹಿಸ್ಸಾ ನಕಾಶೆ ಕೇಳಿದ್ದಕ್ಕೆ ವಾರಗಳವರೆಗೆ ಕಾಯಿಸಿದ್ದಲ್ಲದೇ ಕೊನೆಗೆ 10 ದಿನದ ನಂತರ ದಾಖಲೆ ಕೊಟ್ಟಿದ್ದಾರೆ. ದಾಖಲೆ ಕೊಟ್ಟ ನಂತರ ನಮ್ಮ ಕಾರ್ಯಕರ್ತನಿಗೆ ಹಾಗೆ ಹೋದರೆ ಹೇಗೆ ನೀವು, ಅಂಗಡಿಯಲ್ಲಿ 2 ಎ4 ಸೀಟ್‌ನ ಬಂಡಲ್ ತಂದು ಕೊಡಿ ಎಂದು ಕೇಳಿದ್ದಾರೆ. ಹಾಗಾಗಿ ಗೌರವಪೂರ್ವಕವಾಗಿ ಮೆರವಣಿಗೆಯಲ್ಲಿ 2 ಎ4 ಸೀಟ್ ತಂದು ಅವರಿಗೆ ಕೊಡಲು ಬಂದಿದ್ದೇವೆ ಸಾಹೇಬರನ್ನು ಕರೆಯಿರಿ” ಎಂದು ಭೂದಾಖಲೆಗಳ ಇಲಾಖೆಯ ಕೆಳ ಹಂತದ ಅಧಿಕಾರಿಗಳಿಗೆ ಮನವಿ ಮಾಡಿಕೊಳ್ಳುತ್ತಿದ್ದಂತೆ ತಬ್ಬಿಬ್ಬಾದರು !

ಮತ್ತೆ ಕೆಲ ಕ್ಷಣದವರೆಗೆ ಭಾಜಾ-ಭಜಂತ್ರಿ ಬಾರಿಸಿ, ಜಾಂಜ್ ಸಪ್ಪಳ ಮಾಡಿದ ಕಾರ್ಯಕರ್ತರು “ಸಾಹೇಬರನ್ನು ಕರೆಯಿರಿ ಪಾಪ ನಾವು ಅವರಿಗೆ ಎ4 ಸೀಟು ಕೊಡಬೇಕು” ಎಂದು ಪಟ್ಟು ಹಿಡಿದರು, ಇದಕ್ಕೆ ಭೂದಾಖಲೆಗಳ ಇಲಾಖೆಯ ಕೆಳ ಹಂತದ ಅಧಿಕಾರಿಯೊಬ್ಬರು “ಇಲ್ಲ ಸಾಹೇಬರು, ಗೂಗಲ್ ಮೀಟಿಂಗ್‌ನಲ್ಲಿದ್ದಾರೆ” ಎಂದು ಮನವೊಲಿಸಲು ಮುಂದಾದರಾದರೂ ಕಾರ್ಯಕರ್ತರು ಮಣಿಯಲಿಲ್ಲ.

ಆಡಿಯೋ ದಾಖಲೆ ಪ್ರದರ್ಶಿಸಿದ ಕಾರ್ಯಕರ್ತರು

“ನಮ್ಮ ಕಾರ್ಯಕರ್ತರೊಬ್ಬರು ಸರ್ವೆ ಇಲಾಖೆಯಲ್ಲಿ ಪಾರ್ಮ್ ನಂ.10, ಹಿಸ್ಸಾನಕಾಶೆ ಕೇಳಿದ್ದಕ್ಕೆ ಹಣ ಕೇಳಿದ್ದಾರೆ. ಹಣ ಕೊಡದೇ ಇದ್ದಾಗ ಸತಾಯಿಸಿ 10 ದಿನಗಳ ನಂತರ ದಾಖಲೆ ಕೊಟ್ಟು, ಎ4 ಸೀಟ್‌ಗೆ ಬೇಡಿಕೆ ಇಟ್ಟಿದ್ದಾರೆ. ತಹಸೀಲ್ ಕಾರ್ಯಾಲಯದಲ್ಲಿರುವ ಸರ್ವೆ ಇಲಾಖೆಗೆ ಎ4 ಸೀಟ್ ಇಲ್ಲದಿರುವಷ್ಟು ಗತಿಗೇಡು ಬಂದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ದಾಖಲೆಗಳನ್ನು ಪಡೆಯಲು ಸರ್ಕಾರದ ನಿಯಮಗಳ ಅನ್ವಯ ಸಾರ್ವಜನಿಕರು ಹಣ ಪಾವತಿಸಿದರೂ ಪುನಃ ಭೂ ದಾಖಲೆಗಳ ಸಹಾಯಕ ನಿರ್ದೇಶಕರು ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಣಕ್ಕಾಗಿ ಬೇಡಿಕೆ ಇಡುತ್ತಿರುವುದು, ಇನ್ನಿಲ್ಲದಂತೆ ಪೀಡಿಸುತ್ತಿರುವುದು ಎ4 ಸೀಟು ತಂದುಕೊಡಿ, ಇಲ್ಲವೇ ಮತ್ತೊಂದು ತಂದುಕೊಡಿ ಎಂದು ಕೇಳಿದರೆ ಸಾರ್ವಜನಿಕರು ಏನು ಮಾಡಬೇಕು ಎಂದು ಕೆಆರ್‌ಎಸ್ ರಾಜ್ಯ ಯುವ ಘಟಕದ ಮುಖಂಡ ನಿರುಪಾದಿ ಗೋಮರ್ಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಸರ್ವೆ ಇಲಾಖೆಯ ಅಧಿಕಾರಿಗಳು ಎ4 ಸೀಟ್‌ಗಾಗಿ ಬೇಡಿಕೆ ಇಟ್ಟಿರುವ ಆಡಿಯೋವನ್ನು ಕೆಆರ್‌ಎಸ್ ಮುಖಂಡರು ಪ್ರದರ್ಶಿಸಿದರು. ಈ ಸಂದರ್ಭದಲ್ಲಿ ತಾಲೂಕ ಮಾಜಿ ಅಧ್ಯಕ್ಷ ಚನ್ನಬಸವ ಸೋಮಲಾಪುರ, ತಾಲೂಕ ಕಾರ್ಯದರ್ಶಿ ಕೃಷ್ಣ ಸುಕಾಲಪೇಟೆ, ಮುಖಂಡರಾದ ಮಹೆಬೂಬ್, ಮುರ್ತುಜಾ ಖಾದ್ರಿ, ರಮೇಶ್, ನಾಗರಾಜ್ ಇನ್ನಿತರರಿದ್ದರು.

Recently Updated:

ಕುಂದಾಪುರದಲ್ಲಿ  ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ  ವೈದ್ಯನ ಅಟ್ಟಹಾಸ.!   ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..ಕುಂದಾಪುರದಲ್ಲಿ ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ ವೈದ್ಯನ ಅಟ್ಟಹಾಸ.! ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..
ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..
ಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್  ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!!  ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್ ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!! ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯ
ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗ
ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ