ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ದೂರುದಾರ ಚಿನ್ನಯ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಬುರಡೆಯನ್ನು ನೇತ್ರಾವತಿ ಸ್ನಾನಘಟ್ಟ ಸಮೀಪದ ಅರಣ್ಯದ ಬಂಗ್ಲೆಗುಡ್ಡದಿಂದ ತಾನೇ ತೆಗೆದುಕೊಂಡು ಹೋಗಿ ಹೋರಾಟಗಾರ ಗಿರೀಶ್‌ ಮಟ್ಟಣ್ಣವರ್‌ಗೆ ಕೊಟ್ಟಿದ್ದೆ ಎಂದು ಸೌಜನ್ಯ ಮಾವ ವಿಠಲಗೌ

07 Sep 2025
ಕರಾವಳಿ

ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ದೂರುದಾರ ಚಿನ್ನಯ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಬುರಡೆಯನ್ನು ನೇತ್ರಾವತಿ ಸ್ನಾನಘಟ್ಟ ಸಮೀಪದ ಅರಣ್ಯದ ಬಂಗ್ಲೆಗುಡ್ಡದಿಂದ ತಾನೇ ತೆಗೆದುಕೊಂಡು ಹೋಗಿ ಹೋರಾಟಗಾರ ಗಿರೀಶ್‌ ಮಟ್ಟಣ್ಣವರ್‌ಗೆ ಕೊಟ್ಟಿದ್ದೆ ಎಂದು ಸೌಜನ್ಯ ಮಾವ ವಿಠಲಗೌಡ ಎಸ್‌ಐಟಿ ಮುಂದೆ ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ.



ಶನಿವಾರ ಸಂಜೆ ನೇತ್ರಾವತಿ ಸ್ನಾನಘಟ್ಟದ ಸಮೀಪದ ಅರಣ್ಯಕ್ಕೆ ವಿಠಲ ಗೌಡ ಹಾಗೂ ಹೋರಾಟಗಾರ ಜಯಂತ್‌ ಅವರೊಂದಿಗೆ ಬಂದ‌ ಎಸ್‌ಐಟಿ, ತಲೆಬುರುಡೆ ಸ್ಥಳದ ಮಹಜರು ನಡೆಸಿತು. ಈ ವೇಳೆ ಬಂಗ್ಲೆಗುಡ್ಡಕ್ಕೆ ವಿಠಲ ಗೌಡನನ್ನು ಎಸ್‌ಐಟಿ ತಂಡ ಕರೆದೊಯ್ದಿದೆ. ಗಿರೀಶ್ ಮಟ್ಟಣ್ಣವರ್‌ಗೆ ಬಂಗ್ಲೆಗುಡ್ಡೆ ಕಾಡಿನಿಂದ ಬುರುಡೆ ತೆಗೆದುಕೊಟ್ಟಿದ್ದೆ. ಬಂಗ್ಲೆಗುಡ್ಡೆ ಕಾಡಿನ ಮಣ್ಣಿನ ಮೇಲ್ಭಾಗದಿಂದ ಬುರುಡೆ ತೆಗೆದಿದ್ದೆ ಎಂದು ವಿಠಲಗೌಡನೇ ತನಿಖಾ ತಂಡದ ಎದುರು ಬಾಯಿ ಬಿಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ.


ವಿಠಲ ಗೌಡನ ಪ್ರಮುಖ ಪಾತ್ರ:


ಬುರುಡೆ ಟೀಂಗೆ ಚಿನ್ನಯ್ಯನ ಪರಿಚಯಿಸಿದ್ದೇ ಸೌಜನ್ಯ ಮಾವ ವಿಠಲಗೌಡ. ಚಿನ್ನಯ್ಯನ ಪರಿಚಯಿಸಿ ಬಂಗ್ಲೆಗುಡ್ಡೆ ಕಾಡಿನಿಂದ ಬುರುಡೆ ಕೂಡ ತಂದುಕೊಟ್ಟಿದ್ದ. ಬುರುಡೆಯು ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಅಸ್ಥಿಪಂಜರದ ಅವಶೇಷವಾಗಿದೆ. ಬುರುಡೆ ಗ್ಯಾಂಗ್‌ಗೂ ಮೊದಲೇ ವಿಠಲಗೌಡನಿಗೆ ಚಿನ್ನಯ್ಯ ಪರಿಚಿತನಾಗಿದ್ದ. ವಿಠಲಗೌಡ ನೇತ್ರಾವತಿ ಬಳಿ ಹಲವು ವರ್ಷಗಳ ಹಿಂದೆ ಹೋಟೆಲ್ ಹೊಂದಿದ್ದ. ಸೌಜನ್ಯ ಪ್ರಕರಣದ ಬಳಿಕ ಬೇರೆಡೆ ಹೋಟೆಲ್ ಸ್ಥಳಾಂತರಿಸಿದ್ದ. ನೇತ್ರಾವತಿ ಬಳಿ ಹೋಟೆಲ್‌ ಇದ್ದಾಗ ಚಿನ್ನಯ್ಯ ಬಂದು ಹೋಗುತ್ತಿದ್ದ. ಚಿನ್ನಯ್ಯ ಅನಾಥ ಶವ ಹಾಗೂ ಯುಡಿಆರ್ ಕೇಸ್‌ನ ಶವಗಳನ್ನು ದಫನ್‌ ಮಾಡುವುದನ್ನು ವಿಠಲಗೌಡ ಅರಿತಿದ್ದ. ಅದರಂತೆ ಗಿರೀಶ್ ಮಟ್ಟಣ್ಣವರ್ ರೂಪಿಸಿದ ಪ್ಲಾನ್‌ಗೆ ಚಿನ್ನಯ್ಯ ಪಾತ್ರಧಾರಿಯಾಗಬೇಕಾಯಿತು ಎನ್ನಲಾಗಿದೆ.


2014ರಲ್ಲಿ ಧರ್ಮಸ್ಥಳ ಬಿಟ್ಟಿದ್ದ ಚಿನ್ನಯ್ಯನ ಬಗ್ಗೆ ವಿಠಲಗೌಡನ ಬಳಿ ಇದ್ದ ಮಾಹಿತಿಯಂತೆ ಬುರುಡೆ ಟೀಂ ಹುಡುಕಾಟ ನಡೆಸಿತ್ತು. ಕೊನೆಗೆ ಚಿನ್ನಯ್ಯ ಸಿಕ್ಕ ಬಳಿಕ ಉಜಿರೆಯ ಹೋಟೆಲ್‌ನಲ್ಲಿ ಭೇಟಿ ಮಾಡಿದ್ದರು. ಅಲ್ಲಿ ಗಿರೀಶ್ ಮಟ್ಟಣ್ಣವರ್, ಚಿನ್ನಯ್ಯ ಹಾಗೂ ವಿಠಲಗೌಡ ಸಭೆ ನಡೆಸಿ ತಂತ್ರ ರೂಪಿಸಿದ್ದರು. ಬಳಿಕ ವಿಠಲಗೌಡ ಬುರುಡೆ ಕಥೆಯಲ್ಲಿ ನೇಪಥ್ಯಕ್ಕೆ ಸರಿದಿದ್ದ. ಇದೀಗ ಶನಿವಾರ ಸಂಜೆ ವಿಠಲಗೌಡನನ್ನು ಎಸ್‌ಐಟಿ ಬಂಗ್ಲೆ ಗುಡ್ಡೆಗೆ ಕರೆದುಕೊಂಡು ಹೋಗಿ ಅಲ್ಲಿ ಬುರುಡೆ ಸಿಕ್ಕ ಸ್ಥಳದ ಮಹಜರು ನಡೆಸಿದೆ.


ಇಡೀ ಪ್ರಕರಣದಲ್ಲಿ ಈ ಬುರುಡೆಯ ಸುತ್ತ ಹಲವು ಕತೆಗಳನ್ನು ಹೆಣೆಯಲಾಗಿತ್ತು. ಆದರೆ ಅದೆಲ್ಲದಕ್ಕೂ ಇದೀಗ ಕೊನೆಯಾಗಿದ್ದು ತಲೆಬುರುಡೆಯನ್ನು ಇದೇ ಸ್ಥಳದಿಂದ ತೆಗೆದಿರುವುದು ತನಿಖೆಯಿಂದ‌ ಬಹಿರಂಗಗೊಂಡಿದೆ. ಈ ಪ್ರಕರಣದಲ್ಲಿ ಬುರುಡೆಯನ್ನು ಮೊದಲು‌ ನೋಡಿರುವ ವಿಠಲಗೌಡ ಹಾಗೂ ಜಯಂತ್ ಅವರೊಂದಿಗೆ ಸ್ಥಳಕ್ಕೆ ತೆರಳಿದ‌ ಎಸ್‌ಐಟಿ ಅಧಿಕಾರಿಗಳು ಸ್ಥಳ‌ ಮಹಜರು ನಡೆಸಿದ್ದಾರೆ. ಈ ಪ್ರಕರಣದ ಸತ್ಯ ಹೊರಗೆ ಬಂದಿರುವುದರಿಂದ ವಿಠಲ ಗೌಡನನ್ನು ಬಂಧಿಸುವ ಸಾಧ್ಯತೆ ಇದೆ.

Recently Updated:

ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..
ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!
ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.*  ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ    *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.* ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.* ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.*
ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.
ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..
ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್. ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್.