ಆರ್‌ಎಸ್‌ಎಸ್‌ ನೋಂದಣಿಯಾಗಿಲ್ಲ ಎಂಬ ಆರೋಪಕ್ಕೆ ಮೋಹನ್ ಭಾಗವತ್ ಸ್ಪಷ್ಟನೆ

09 Nov 2025
ರಾಜ್ಯ

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನೋಂದಣಿ ಯಾಕಾಗಿಲ್ಲ?:

ಖಡಕ್ ಉತ್ತರ ಕೊಟ್ಟ RSS ಮುಖ್ಯಸ್ಥ ಮೋಹನ್ ಭಾಗವತ್

ಆರ್‌ಎಸ್‌ಎಸ್‌ ನೋಂದಣಿಯಾಗಿಲ್ಲ ಎಂಬ ಆರೋಪಕ್ಕೆ ಮೋಹನ್ ಭಾಗವತ್ ಸ್ಪಷ್ಟನೆ ನೀಡಿದ್ದಾರೆ. ಬ್ರಿಟಿಷ್ ಕಾಲದಲ್ಲಿ ಸಂಘ ಆರಂಭವಾಗಿದ್ದು, ಸ್ವಾತಂತ್ರ್ಯ ನಂತರವೂ ರಿಜಿಸ್ಟ್ರೇಶನ್ ಕಡ್ಡಾಯ ಮಾಡಿಲ್ಲ.

ಇದು ಸ್ವತಂತ್ರ ಹಾಗೂ ಸಂವಿಧಾನಾತ್ಮಕ ಸಂಘವಾಗಿದ್ದು, ಆದಾಯ ತೆರಿಗೆ ಕೂಡ ಕಟ್ಟುತ್ತಿದ್ದೇವೆ. ಯಾವುದೇ ಧರ್ಮದವರು ಭಾರತ ಮಾತೆಯ ಮಕ್ಕಳಾಗಿ RSS ಸೇರಲು ಅವಕಾಶವಿದೆ ಎಂದು ತಿಳಿಸಿದ್ದಾರೆ.


ಬೆಂಗಳೂರು, ನವೆಂಬರ್ 09: RSS ಚಟುವಟಿಕೆಗಳಿಗೆ ರಾಜ್ಯ ಸರ್ಕಾರದಿಂದ ನಿರ್ಬಂಧ ವಿಚಾರ ತೀವ್ರ ವಿವಾದ ಸ್ವರೂಪ ಪಡೆದಿರುವ ನಡುವೆ, ರಾಷ್ಟ್ರೀಯ ಸ್ವಯಂ ಸೇವಕ ಸಂಘ ನೋಂದಣಿ ಆಗಿಲ್ಲ. ಇವರಿಗೇನು ಪ್ರತ್ಯೇಕ ಕಾನೂನು ದೇಶದಲ್ಲಿ ಇದೆಯಾ ಎಂಬ ಪ್ರಶ್ನೆಗಳು ಕಾಂಗ್ರೆಸ್ ಪಾಳಯದಿಂದ ಕೇಳಿಬಂದಿದ್ದು. ಹಲವು ಆರೋಪಗಳನ್ನು ಸಹ RSS ಮೇಲೆ ಮಾಡಲಾಗಿತ್ತು. ಇವುಗಳಿಗೆಲ್ಲ ಈಗ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರೇ ಉತ್ತರ ಕೊಟ್ಟಿದ್ದಾರೆ.


ಮೋಹನ್ ಭಾಗವತ್ ಸ್ಪಷ್ಟನೆ ಏನು?

ಆರ್ಎಸ್ಎಸ್ ಶತಮಾನೋತ್ಸವ ಹಿನ್ನೆಲೆ ಹೊಸಕೆರೆಹಳ್ಳಿಯ PES ಕಾಲೇಜು ಸಭಾಂಗಣದಲ್ಲಿ RSS ಮುಖ್ಯಸ್ಥ ಮೋಹನ್ ಭಾಗವತ್ ನಿನ್ನೆ ಉಪನ್ಯಾಸ ನೀಡಿದ್ದರು. ಇಂದು ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಹಾಗೂ ಕೇರಳ ರಾಜ್ಯದಿಂದ ಆಗಮಿಸಿರುವ ವಿವಿಧ ಕ್ಷೇತ್ರಗಳ ಆಹ್ವಾನಿತರ ಪ್ರಶ್ನೆಗೆ ಅವರು ಉತ್ತರ ನೀಡಿದ್ದು, ಹಲವು ವಿಚಾರಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. RSS ಸ್ಥಾಪನೆ ಆಗಿದ್ದು 1925ರಲ್ಲಿ. ಆಗ ಭಾರತದಲ್ಲಿದ್ದ ಬ್ರಿಟಿಷರ ಬಳಿ ನಾವು ಸಂಘವನ್ನು ನೋಂದಣಿ ಮಾಡಿಕೊಳ್ಳಬೇಕಿತ್ತಾ? ಸ್ವಾತಂತ್ರ್ಯ ಬಂದ ನಂತರವೂ ನೋಂದಣಿ ಕಡ್ಡಾಯ ಮಾಡಿಲ್ಲ. ನಮ್ಮದು ಸ್ವತಂತ್ರ ಹಾಗೂ ಕಾನೂನಾತ್ಮಕ ಸಂಘವಾಗಿದ್ದು, ಹೀಗಾಗಿಯೇ ನೋಂದಣಿ ಮಾಡಿಸಿಲ್ಲ. ಹಿಂದೂ ಧರ್ಮ ಕೂಡಾ ನೋಂದಣಿ ಆಗಿಲ್ಲ. RSS ನಿಷೇಧ ಮಾಡುವ ಬಗ್ಗೆಯೂ ಚರ್ಚೆ ನಡೆದಿದ್ದು, ಕೋರ್ಟ್ ಇದನ್ನು ತಿರಸ್ಕರಿಸಿದೆ. ನಮ್ಮದು ಸಂವಿಧಾನಾತ್ಮಕ ಸಂಘವಾಗಿದ್ದು, ಆರ್ಎಸ್ಎಸ್ ಆದಾಯ ತೆರಿಗೆ ಸಹ ಕಟ್ಟುತ್ತಿದೆ ಎಂದು ಹೇಳಿದ್ದಾರೆ.


RSSನಲ್ಲಿ ಯಾರಿಗೆಲ್ಲ ಅವಕಾಶ?

ಆರ್ಎಸ್ಎಸ್ನಲ್ಲಿ ಮುಸ್ಲಿಮರನ್ನು ಸೇರಿಸಿಕೊಳ್ಳಲು ಅವಕಾಶ ಇದೆಯಾ ಮತ್ತು ಅಲ್ಪಸಂಖ್ಯಾತರಿಗೆ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಉದ್ದೇಶ ಇದೆಯಾ ಎಂಬ ಪ್ರಶ್ನೆಗೂ ಉತ್ತರಿಸಿದ ಮೋಹನ್ ಭಾಗವತ್, ನಮ್ಮಲ್ಲಿ ಜಾತಿ, ಲಿಂಗ, ಮುಸ್ಲಿಂ, ಕ್ರೈಸ್ತ, ಬ್ರಾಹ್ಮಣ, ಶೈವ ಎಂಬ ಪಂಥಗಳಿಗೆ ಅವಕಾಶ ಇಲ್ಲ. ಯಾವುದೇ ಧರ್ಮದವರು ಶಾಖೆಗೆ ಬರಬಹುದು. ಆದರೆ ಶಾಖೆಗೆ ಬರುವವರು ತಮ್ಮ ಧರ್ಮವನ್ನು ಹೊರಗಿಟ್ಟು ಭಾರತ ಮಾತೆಯ ಮಕ್ಕಳಾಗಿ ಬರಬೇಕು. ಹಿಂದೂ ಸಮಾಜವನ್ನು ಒಪ್ಪಿಕೊಂಡು ಶಾಖೆಗೆ ಬರಬೇಕು. ಸಂಘದ ನಿಯಮಗಳನ್ನು ಪಾಲನೆ ಮಾಡಬೇಕು ಎಂದಿದ್ದಾರೆ.

Recently Updated:

ಕುಂದಾಪುರದಲ್ಲಿ  ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ  ವೈದ್ಯನ ಅಟ್ಟಹಾಸ.!   ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..ಕುಂದಾಪುರದಲ್ಲಿ ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ ವೈದ್ಯನ ಅಟ್ಟಹಾಸ.! ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..
ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..
ಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್  ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!!  ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್ ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!! ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯ
ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗ
ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ