ಇಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಭೇಟಿ; ಮೋದಿ ಸ್ವಾಗತಕ್ಕೆ ಕೃಷ್ಣ ನಗರಿ ಸಜ್ಜು

28 Nov 2025
ಕರಾವಳಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ನ.28) ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಶ್ರೀಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡುತ್ತಿರುವ ನೆಚ್ಚಿನ ಪ್ರಧಾನಿಯವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ ಸಹಿತ ವೇದ ಮಂತ್ರಗಳ ಪಠನದೊಂದಿಗೆ ಬರಮಾಡಿಕೊಳ್ಳಲಾಗುತ್ತದೆ.


ಪುತ್ತಿಗೆ ಶ್ರೀ ಸನ್ಯಾಸಾಶ್ರಮದ ಸುವರ್ಣ ಮಹೋತ್ಸವ

ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಸನ್ಯಾಸಾಶ್ರಮ ಪ್ರವೇಶಿಸಿ 50 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಅದರ ಸುವರ್ಣ ಮಹೋತ್ಸವದ ಭಾಗವಾಗಿಯೂ ಈ ಕಾರ್ಯಕ್ರಮ ನಡೆಯ ಲಿದೆ. ವಿಶೇಷವಾಗಿ ದೇವರಿಗೆ ಸುವರ್ಣ ತೀರ್ಥ ಮಂಟಪ ಸಮರ್ಪಣೆಯನ್ನು ಶ್ರೀಪಾದರು ಪ್ರಧಾನಿ ನರೇಂದ್ರ ಮೋದಿಯವರ ಮೂಲಕ ಮಾಡುತ್ತಿದ್ದಾರೆ. ಮೋದಿಯವರು ಶ್ರೀ ಕೃಷ್ಣ ಮಠಕ್ಕೆ ಪ್ರವೇಶಿಸಿ ದೇವರ ದರ್ಶನ ಪಡೆದ ಅನಂತರ ಸುವರ್ಣ ಮಂಟಪದ ಸಮರ್ಪಣೆ ಮಾಡಲಿದ್ದಾರೆ.


ಶ್ರೀಮಠದ ಪರಿಸರ ಸರ್ವಾಲಂಕೃತ

ಪ್ರಧಾನಿ ನರೇಂದ್ರ ಮೋದಿಯವರ ಆಗ ಮನದ ಹಿನ್ನೆಲೆಯಲ್ಲಿ ಇಡೀ ಮಠದ ಪರಿಸರ ವನ್ನು ಅಲಂಕಾರ ಮಾಡಲಾಗಿದೆ. ವಿಶೇಷವಾಗಿ ರಥಬೀದಿಯ ಆವರಣದಲ್ಲಿ ಇರುವ ಕನಕನ ಗುಡಿಯನ್ನು ಹೂವಿನಿಂದ ಅಲಂಕರಿಸಲಾಗಿದೆ. ಪ್ರಧಾನಿಯವರು ಕನಕನ ಮೂರ್ತಿಗೆ ಮಾಲಾರ್ಪಣೆ ಮಾಡಲಿರುವುದರಿಂದ ಇಡೀ ಮಂದಿರದ ಪರಿಸರವನ್ನು ವಿವಿಧ ಹೂವುಗಳಿಂದ ಅಲಂಕರಿಸಲಾಗಿದೆ. ಕನಕನ ಕಿಂಡಿ, ಕನಕ ಗೋಪುರ, ಶ್ರೀ ಕೃಷ್ಣಮಠದ ಮುಖ್ಯದ್ವಾರ, ಗೀತಾ ಮಂದಿರ ಹೀಗೆ ಎಲ್ಲೆಡೆಯಲ್ಲೂ ವಿದ್ಯುದ್ದೀಪಾಲಂಕಾರ ಮಾಡಲಾಗಿದೆ. ದೇವಸ್ಥಾನದ ಒಳಭಾಗದಲ್ಲಿ ಹೂವಿನ ಅಲಂಕಾರವು ಇನ್ನಷ್ಟು ಆಕರ್ಷಕವಾಗಿದೆ.


ಪಾರಾಯಣಕ್ಕೆ ಬೃಹತ್‌ ವೇದಿಕೆ

ಲಕ್ಷ ಕಂಠ ಗೀತಾ ಪಾರಾಯಣಕ್ಕೆ ಶ್ರೀ ಕೃಷ್ಣಮಠದ ಪಾರ್ಕಿಂಗ್‌ ಪ್ರದೇಶದಲ್ಲಿ ಬೃಹತ್‌ ವೇದಿಕೆ ನಿರ್ಮಾಣ ಮಾಡಲಾಗಿದೆ. ಸಭಾಂಗಣ ಹಾಗೂ ವೇದಿಕೆ ನಿರ್ಮಾಣ ಕಾರ್ಯ ಗುರುವಾರ ರಾತ್ರಿಯೇ ಪೂರ್ಣಗೊಂಡಿದೆ. ವೇದಿಕೆಯ ಮೇಲ್ಭಾಗದಲ್ಲಿ ದೊಡ್ಡ ಎಲ್‌ಇಡಿ ಸ್ಕ್ರೀನ್‌ ಅಳವಡಿಕೆ ಮಾಡಲಾಗಿದೆ. ಒಂದು ಭಾಗದಲ್ಲಿ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಭಾವಚಿತ್ರ, ಇನ್ನೊಂದು ಭಾಗದಲ್ಲಿ ಮೋದಿಯವರ ಭಾವಚಿತ್ರ ಅಳವಡಿಸಲಾಗಿದೆ. ಹಾಗೆಯೇ ಲಕ್ಷ ಕಂಠ ಗೀತಾ ಪಾರಾಯಣ ಎಂಬುದನ್ನು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಬರೆಯಲಾಗಿದೆ. ವೇದಿಕೆಯ ಕೆಳಭಾಗದಲ್ಲಿ ಒಂದು ಕಡೆ ಪುತ್ತಿಗೆ ಮಠಾಧೀಶರು ಇನ್ನೊಂದು ಕಡೆ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರ ಭಾವಚಿತ್ರ ಅಳವಡಿಸಲಾಗಿದೆ. ಅನಂತರ ಮುಕ್ತ ವಲಯ ಇರಲಿದೆ.


ಇಲ್ಲಿಗೆ ಯಾರಿಗೂ ಪ್ರವೇಶ ಇರುವುದಿಲ್ಲ. ಅನಂತರ ಪಾರಾಯಣಕ್ಕೆ ಕುಳಿತುಕೊಳ್ಳುವವರಿಗೆ ಪ್ರತ್ಯೇಕ ಕಂಪಾರ್ಟ್‌ಮೆಂಟ್‌ ಮಾದರಿಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಯೇ ಪಕ್ಕದಲ್ಲಿ ಗಣ್ಯಾತಿಗಣ್ಯರಿಗೆ, ಗಣ್ಯರಿಗೆ, ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗಿದೆ. ಹಿಂಭಾಗದಲ್ಲಿ ಸಾರ್ವಜನಿಕರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ವ್ಯವಸ್ಥೆ ಮಾಡಲಾಗಿದೆ. ಅಲ್ಲಲ್ಲಿ ಬೃಹದಾಕಾರದ ಎಲ್‌ಇಡಿ ಸ್ಕ್ರೀನ್‌ಗಳನ್ನು ಅಳವಡಿಸಲಾಗಿದೆ.


ಮೋದಿಗೆ ಪತ್ರೊಡೆ!

ಪ್ರಧಾನಿ ನರೇಂದ್ರ ಮೋದಿಯವರು ಗೀತಾ ಮಂದಿರದಲ್ಲಿ ಲಘು ಉಪಾಹಾರ ಸೇವನೆ ಮಾಡಲಿದ್ದಾರೆ. ಈ ವೇಳೆ ಅವರಿಗೆ ಶ್ರೀ ಕೃಷ್ಣ ಪ್ರಸಾದದ ಜತೆಗೆ ಪತ್ರೊಡೆ ಹಾಗೂ ಕರಾವಳಿಯ ವಿಶೇಷ ಖಾದ್ಯಗಳನ್ನು ನೀಡಲಾಗುತ್ತದೆ.


ಮೋದಿ ಇಂದಿನ ಕಾರ್ಯಕ್ರಮ

ಉಡುಪಿ: ಉಡುಪಿ, ಕೃಷ್ಣಮಠದಲ್ಲಿ ಶುಕ್ರವಾರ ಪ್ರಧಾನಿಯವರ ದಿನಚರಿ ಹೀಗಿರಲಿದೆ:


-ಆದಿಉಡುಪಿ ಹೆಲಿಪ್ಯಾಡ್‌ಗೆ ಆಗಮನ


-ಬೆ.11ರಿಂದ ಬನ್ನಂಜೆ-ಕಲ್ಸಂಕದ ವರೆಗೆ ರೋಡ್‌ ಶೋ


-ಶ್ರೀಕೃಷ್ಣ ಮಠದ ರಥಬೀದಿಗೆ ಪ್ರವೇಶ


-ಕನಕ ಮಂದಿರಕ್ಕೆ ಭೇಟಿ, ಕನಕನ ಮೂರ್ತಿಗೆ ಪುಷ್ಪಾರ್ಚನೆ


-ಕನಕ ಕಿಂಡಿಗೆ ಜೋಡಿಸಿರುವ ಕನಕ ಕವಚ ಉದ್ಘಾಟನೆ


-ಕನಕನ ಕಿಂಡಿಯ ಮೂಲಕ ಶ್ರೀ ಕೃಷ್ಣ ದರ್ಶನ


-ಮಧ್ವ ಸರೋವರದಲ್ಲಿ ತೀರ್ಥ ಪ್ರೋಕ್ಷಣೆ


-ಶ್ರೀ ಕೃಷ್ಣ ದರ್ಶನ, ಸುವರ್ಣ ತೀರ್ಥ ಮಂಟಪ ಉದ್ಘಾಟನೆ


-ಪರ್ಯಾಯ ಶ್ರೀಪಾದರಿಂದ ಶ್ರೀ ಕೃಷ್ಣ ದೇವರ ಎದುರು ಕೋಟಿ ಗೀತಾ ಲೇಖನ ಯಜ್ಞ ದೀಕ್ಷೆ ಸ್ವೀಕಾರ


-ಚಂದ್ರಶಾಲೆಯಲ್ಲಿ ಮಠಾಧೀಶರೊಂದಿಗೆ ಚರ್ಚೆ


-ಮುಖ್ಯಪ್ರಾಣ ದೇವರ ದರ್ಶನ


-ಗೀತಾ ಮಂದಿರದಲ್ಲಿ ಪರ್ಯಾಯ ಶ್ರೀಪಾದರ ಜತೆ ಚರ್ಚೆ


-ಅನಂತಶಯನ ಮೂರ್ತಿ ಉದ್ಘಾಟನೆ


-ಲಘು ಉಪಾಹಾರ ಸೇವನೆ


-ಗೀತಾ ಮಂದಿರದಿಂದ ಭಗವದ್ಗೀತೆ ಪಾರಾಯಣದ ಮುಖ್ಯ ವೇದಿಕೆಗೆ ಪಯಣ


-ಸಾಮೂಹಿಕವಾಗಿ ಭಗವದ್ಗೀತೆಯ 15ನೇ ಅಧ್ಯಾಯ ಪಠನ


-ಶ್ರೀಮಠದಿಂದ ವಿಶೇಷ ಗೌರವಾಭಿನಂದನೆ ಸ್ವೀಕಾರ


-ಲಕ್ಷಕಂಠ ಗೀತಾ ಪಾರಾಯಣದಲ್ಲಿ ಭಾಷಣ


-ಮ.1 ಗಂಟೆಗೆ ವೇದಿಕೆಯಿಂದ ಹೆಲಿಪ್ಯಾಡ್‌ಗೆ ನಿರ್ಗಮನ


-ಆದಿ ಉಡುಪಿ ಹೆಲಿಪ್ಯಾಡ್‌ನಿಂದ ಗೋವಾದ ಕಡೆಗೆ ಪಯಣ


ಕೋಟಿ ಗೀತಾ ಲೇಖನ ಯಜ್ಞ ನಮ್ಮ ಪರ್ಯಾಯ ಅವಧಿಯ ಪ್ರಧಾನ ಕಾರ್ಯಕ್ರಮ. ಲಕ್ಷ ಕಂಠ ಗೀತಾ ಪಾರಾಯಣದೊಂದಿಗೆ ಪ್ರಧಾನಿ ಮೋದಿಯವರ ಮೂಲಕ ಅದನ್ನು ಶ್ರೀ ಕೃಷ್ಣ ದೇವರಿಗೆ ಸಮರ್ಪಿಸುವ ಸಂಕಲ್ಪ ಮಾಡಿದ್ದೇವೆ.

-ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಪರ್ಯಾಯ ಶ್ರೀ ಪುತ್ತಿಗೆ ಮಠ

Recently Updated:

ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..
ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!
ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.*  ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ    *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.* ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.* ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.*
ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.
ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..
ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್. ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್.