ಒತ್ತುವರಿ ಭೂ ಮಾಲೀಕರಿಂದ ಜೀವ ಬೆದರಿಕೆ.! ಭದ್ರತೆ ನೀಡುವಂತೆ ಲೋಕಾಯುಕ್ತ ಎಸ್ ಪಿ ಅವರಿಗೆ ಜೋಗಿನ್ ರಮೇಶ್ ನಾಯಕ್ ಗಂಗಾವತಿ ಇವರಿಂದ ಮನವಿ.

29 Nov 2025
ರಾಜ್ಯ

ಗಂಗಾವತಿ: ಪಿತ್ರಾಜಿತ ಆಸ್ತಿಯ ವಾರಸುದಾರರಾದ ಜೋಗಿನ್ ಭರಮಪ್ಪ ತಂದೆ ಅನಾಳಪ್ಪ ವಾಲ್ಮೀಕಿ ನಾಯಕ ಅವರ ಭೂಮಿಗೆ ಸಂಬಂಧಿಸಿದಂತೆ ಪ್ರಕರಣ ಗಂಗಾವತಿ ನ್ಯಾಯಾಲಯದಲ್ಲಿ 8/2021 ರಂದು ದಾವೆ ಹೂಡಲಾಗಿದ್ದು ಈ ಹಿನ್ನೆಲೆಯಲ್ಲಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ ಕೆಲವು ಪಟ್ಟ ಭದ್ರ ಹಿತಾಸಕ್ತಿಗಳಿಂದ ಅನಾಮಿಕ ಕರೆಗಳ ಮೂಲಕ ಜೀವ ಬೆದರಿಕೆ ಹಾಕಲಾಗುತ್ತಿದ್ದು. ಇದಕ್ಕೆ ಸಂಬಂಧಿಸಿದಂತೆ ಜೀವ ಭದ್ರತೆ ಕಲ್ಪಿಸುವಂತೆ ರಮೇಶ ನಾಯಕ ಜೋಗಿನ್ ಲೋಕಾಯುಕ್ತ ಎಸ್ಪಿ ಅವರಿಗೆ ಶನಿವಾರ ಮನವಿ ಪತ್ರ ಸಲ್ಲಿಸಿದರು. ತಾಲೂಕಾ ಪಂಚಾಯತ್ ಮಂಥನ ಸಭಾಂಗಣದಲ್ಲಿ ಸಾರ್ವಜನಿಕರ ಅಹವಾಲು ಕುಂದು ಕೊರತೆಗಳನ್ನು ಸ್ವೀಕರಿಸಲು ಆಗಮಿಸಿದ ಲೋಕಾಯುಕ್ತರಿಗೆ ಅರ್ಜಿದಾರರಾದ ರಮೇಶ ಜೋಗಿನ್ ಅವರು ಗಂಗಾವತಿ ನಗರದ ಸರ್ವೆ ನಂಬರ್ 46 /ಅ ಸಂಬಂಧಿಸಿದಂತೆ 16 ಎಕರೆ 11ಗುಂಟೆ ಪೈಕಿ ಸರ್ಕಾರಕ್ಕೆ 1 ಎಕರೆ 33 ಗುಂಟೆ ಟಿ.ಡಿ. ಪಿ. ಗೆ ಸ್ವಾದಿನ ಗೊಂಡಿರುತ್ತದೆ.

ಉಳಿದ ಭೂಮಿ 14 ಎಕರೆ 18 ಗುಂಟೆ ಗಣ್ಯ ವ್ಯಕ್ತಿಗಳು ಪ್ರಭಾವದಿಂದ ಪಹಣಿಯಲ್ಲಿ ಏಕಾಏಕೆ ಬಂದು ಬೇರೆ ವ್ಯಕ್ತಿಗಳಿಗೆ ವೈವಾಟು ಆಗಿರುತ್ತದೆ ಪ್ರಭಾವಿ ರಾಜಕಾರಣಿಗಳು ಹಾಗೂ ಉದ್ಯಮಿಗಳು ಒತ್ತುವರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದಂತೆ ಎಲ್ಲಾ ಮೂಲ ದಾಖಲೆಗಳನ್ನು ನಾವು ಹೊಂದಿದ್ದು. ಮತ್ತಷ್ಟು ದಾಖಲಾತಿ ಗಳಿಗಾಗಿ ಸಂಬಂಧಿಸಿದ ಇಲಾಖೆಗಳಿಗೆ ಮನವಿ ಪತ್ರ ಹಾಗೂ ಮಾಹಿತಿ ಹಕ್ಕು ಅಡಿಯಲ್ಲಿ ಮಾಹಿತಿ ನೀಡುವಂತೆ ಹಲವಾರು ಸಾರಿ ಮನವಿ ಮಾಡಿದರು ಸಹ ಇದುವರೆಗೂ ಯಾವುದೇ ಅಧಿಕಾರಿ ವರ್ಗದವರು ಸ್ಪಂದಿಸದೆ ಇರುವುದು ನಮ್ಮ ಆಡಳಿತ ವ್ಯವಸ್ಥೆಗೆ ಹಿಡಿದ ಕನ್ನಡಿಯಾಗಿದೆ. ಕರ್ನಾಟಕದ ರಾಜ್ಯಪಾಲರಿಗೂ ಹಾಗೂ ಮುಖ್ಯಮಂತ್ರಿಗಳು ಕೊಪ್ಪಳ ಉಸ್ತುವಾರಿ ಸಚಿವರು ಗಂಗಾವತಿ ಶಾಸಕರಿಗೂ ಸಂಬಂಧಪಟ್ಟ ಅಧಿಕಾರಿಗಳಿಗೂ ನೀಡಿದರು ಜೀವ ಭದ್ರತೆಗೆ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿದರು ಸಹ ಇದುವರೆಗೂ ಯಾವುದೇ ಕ್ರಮ ತೆಗೆದುಕೊಳ್ಳದೇ ಇರುವುದು ಗಮನಿಸಿದರೆ ಪ್ರಭಾವಿಗಳ ಒತ್ತಡಕ್ಕೆ ಒಳಗಾಗಿದ್ದಾರೆ ಎಂದು ಸ್ಪಷ್ಟವಾಗುತ್ತದೆ. ಈ ಹಿನ್ನೆಲೆಯಲ್ಲಿ ನಮ್ಮ ಜೀವಕ್ಕೆ ಆಪತ್ತು ಬರುವ ಸಾಧ್ಯತೆಗಳು ಇದ್ದು. ನಮ್ಮನ್ನೇ ನಂಬಿಕೊಂಡಿರುವ ನಮ್ಮ ಕುಟುಂಬಸ್ಥರ ರಕ್ಷಣೆಗಾಗಿ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಲೋಕಾಯುಕ್ತ ಎಸ್ಪಿ ಅವರಿಗೆ ರಮೇಶ ಜೋಗಿನ್ ಮನವಿ ಮಾಡಿದ್ದಾರೆ.

ಕಾರಣ ಉದಾಹರಣೆ ಎಂಬಂತೆ

ಇತ್ತೀಚಿಗಷ್ಟೇ ಗಂಗಾವತಿಯಲ್ಲಿ ಕೊಲೆಗಳ ಪ್ರಕರಣ ಮಾರಣ್ಯಂತಿಕ ಹಲ್ಲೆಗಳು ಸೇರಿದಂತೆ ಪ್ರಕರಣಗಳು ಹೆಚ್ಚುತ್ತಿದ್ದು ನಮಗೆ ರಕ್ಷಣೆ ನೀಡಬೇಕೆಂದು ರಮೇಶ್ ಅವರು ಲೋಕಾಯುಕ್ತ ಎಸ್ಪಿ ಅವರಿಗೆ ಮನವಿ ಸಲ್ಲಿಸಿದರು.

Recently Updated:

ಕುಂದಾಪುರದಲ್ಲಿ  ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ  ವೈದ್ಯನ ಅಟ್ಟಹಾಸ.!   ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..ಕುಂದಾಪುರದಲ್ಲಿ ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ ವೈದ್ಯನ ಅಟ್ಟಹಾಸ.! ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..
ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..
ಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್  ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!!  ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್ ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!! ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯ
ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗ
ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ