ಲಂಚ ತೆಗೆದುಕೊಳ್ಳುವಾಗ ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದ ಇನ್ಸ್‌ಪೆಕ್ಟರ್‌, ಗೋವಿಂದರಾಜು.! ಕೆ.ಪಿ. ಅಗ್ರಹಾರ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು, ಚೀಟಿ ವ್ಯವಹಾರದ ಪ್ರಕರಣವೊಂದರಲ್ಲಿ 4 ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಒಟ್ಟು 5 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಅ

30 Jan 2026
ರಾಜ್ಯ

ಸಿಟಿ ಪೊಲೀಸರ ಇಮೇಜ್‌ಗೆ ಧಕ್ಕೆ ತರುವಂತಹ ಘಟನೆಯಲ್ಲಿ, ಕೆ.ಪಿ. ಅಗ್ರಹಾರ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು ಬರೋಬ್ಬರಿ 4 ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಚೀಟಿ ವ್ಯವಹಾರದ ಪ್ರಕರಣವೊಂದರಲ್ಲಿ ದೂರುದಾರರಿಗೆ ಅನುಕೂಲ ಮಾಡಿಕೊಡಲು ಹಾಗೂ 'ಬಡ್ಸ್ ಆಕ್ಟ್' ಅಡಿ ಕೇಸ್ ದಾಖಲಿಸುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆಯಿಟ್ಟಿದ್ದ ಇನ್ಸ್‌ಪೆಕ್ಟರ್‌ಗೆ ಈಗ ಲೋಕಾಯುಕ್ತರ ಅತಿಥಿಯಾಗಿದ್ದಾರೆ.ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್ ದೇವರಾಜು ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯು ಸಿನಿಮಾ ಸ್ಟೈಲ್‌ನಲ್ಲಿತ್ತು. ಮೂಲಗಳ ಪ್ರಕಾರ, ಇನ್ಸ್‌ಪೆಕ್ಟರ್ ಗೋವಿಂದರಾಜು ಒಟ್ಟು 5 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು.ಈಗಾಗಲೇ 1 ಲಕ್ಷ ರೂ. ಪಡೆದಿದ್ದ ಅವರು, ಬಾಕಿ 4 ಲಕ್ಷ ರೂಪಾಯಿಗಳನ್ನು ಪಡೆಯಲು ಚಾಮರಾಜಪೇಟೆಯ ಸಿಎಆರ್ (CAR) ಗ್ರೌಂಡ್ ಬಳಿ ದೂರುದಾರರನ್ನು ಬರಹೇಳಿದ್ದರು. ಹಣ ಪಡೆಯುತ್ತಿದ್ದಂತೆಯೇ ಲೋಕಾಯುಕ್ತ ಅಧಿಕಾರಿಗಳು ಇನ್ಸ್‌ಪೆಕ್ಟರ್ ಮೇಲೆ ದಾಳಿ ನಡೆಸಿದ್ದಾರೆ.ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆಯಲು ಮುಂದಾದಾಗ ಇನ್ಸ್‌ಪೆಕ್ಟರ್ ಗೋವಿಂದರಾಜು ತೀವ್ರ ಪ್ರತಿರೋಧ ಒಡ್ಡಿದ್ದಾರೆ. ಆರಕ್ಕೂ ಹೆಚ್ಚು ಅಧಿಕಾರಿಗಳು ಅವರನ್ನು ಹಿಡಿದುಕೊಂಡಿದ್ದರೂ, ಕಿರುಚಾಡುತ್ತಾ ರೋಷಾವೇಶ ಪ್ರದರ್ಶಿಸಿದ್ದಾರೆ.ಈ ಹೈಡ್ರಾಮಾ ಸಾರ್ವಜನಿಕರ ಗಮನ ಸೆಳೆದಿದ್ದು, ಪೊಲೀಸರೇ ಸಿನಿಮಾ ಸ್ಟೈಲ್‌ನಲ್ಲಿ ಪ್ರತಿಭಟಿಸಿದ್ದು ಚರ್ಚೆಗೆ ಕಾರಣವಾಗಿದೆ.

ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ ದೂರುದಾರ ಸೂರಜ್, "ಪ್ರತಿದಿನ ಠಾಣೆಗೆ ಕರೆಸಿ ಹಿಂಸೆ ನೀಡಲಾಗುತ್ತಿತ್ತು. ಪ್ರಕರಣದಿಂದ ಪಾರಾಗಲು ಎಸಿಪಿ ಚಂದನ್ ಅವರಿಗೆ ಹಣ ನೀಡಬೇಕು ಎಂದು ಇನ್ಸ್‌ಪೆಕ್ಟರ್ ಹೇಳುತ್ತಿದ್ದರು. ಪೊಲೀಸ್ ಇಲಾಖೆ ಎಂದರೆ ನ್ಯಾಯ ನೀಡುವ ಜಾಗ ಅಂದುಕೊಂಡಿದ್ದೆವು, ಆದರೆ ಇಲ್ಲಿ ನಡೆಯುತ್ತಿರುವುದೇ ಬೇರೆ," ಎಂದು ನೋವು ತೋಡಿಕೊಂಡಿದ್ದಾರೆ.

ಈ ಬಗ್ಗೆ ಮಾತನಾಡಿದ ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್‌ ದೇವರಾಜು,'ನಿನ್ನೆ ಟ್ರ್ಯಾಪ್ ಕೇಸ್ ಮಾಡಿದ್ದೇವೆ.ಪ್ರಿವೆನ್ಷನ್ ಆಫ್ ಕರಪ್ಷನ್ ಆಯಕ್ಟ್ ಅಡಿ ನಾವು ಟ್ರ್ಯಾಪ್ ಮಾಡಿದ್ದೇವೆ. ಗೋವಿಂದರಾಜು ಎಂಬ ಇನ್ಸ್ಪೆಕ್ಟರ್ ನ ಟ್ರ್ಯಾಪ್ ಮಾಡಲಾಗಿದೆ. ಐದು ಲಕ್ಷ ಹಣ ಡಿಮ್ಯಾಂಡ್ ಮಾಡಿದ್ದರು. 1 ಲಕ್ಷ ತೆಗೆದುಕೊಂಡಿದ್ದು, ಇನ್ನೂ 4 ಲಕ್ಷ ಬೇಡಿಕೆ ಇಟ್ಟಿದ್ದರು. ಅದನ್ನು ಪಡೆಯುವಾಗ ಟ್ರ್ಯಾಪ್‌ ಮಾಡಿದ್ದೇವೆ' ಎಂದು ತಿಳಿಸಿದ್ದಾರೆ.

ಚಾಮರಾಜಪೇಟೆಯ ಸಿಎಆರ್ ಗ್ರೌಂಡ್ ಬಳಿ ಟ್ರ್ಯಾಪ್ ಮಾಡಲಾಗಿದೆ. ದೂರುದಾರ ಮಹಮ್ಮದ್‌ ಅಕ್ಬರ್ ಹಾಗೂ ಆತನ ಸ್ನೇಹಿತರ ಮೇಲೆ ಪ್ರಕರಣ ದಾಖಲಾಗಿರುತ್ತೆ. ಈ ಸಂಬಂಧ ಅವರಿಗೆ ಸಹಾಯ ಮಾಡಲು ಹಣ ಕೇಳಿದ್ದರು. ಈ ಬಗ್ಗೆ ದೂರು ಪಡೆದು ನಾವು ಟ್ರ್ಯಾಪ್ ಮಾಡಿದ್ದೇವೆ. ಹಣ ಪಡೆಯುವಾಗ ನಾವು ಟ್ರ್ಯಾಪ್ ಮಾಡಿದ್ದೆವು ಎಂದು ಹೇಳಿದ್ದಾರೆ.


Recently Updated:

ಕುಂದಾಪುರದಲ್ಲಿ  ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ  ವೈದ್ಯನ ಅಟ್ಟಹಾಸ.!   ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..ಕುಂದಾಪುರದಲ್ಲಿ ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ ವೈದ್ಯನ ಅಟ್ಟಹಾಸ.! ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..
ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..
ಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್  ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!!  ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್ ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!! ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯ
ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗ
ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ