ಕಾರ್ಕಳ : ಕಾರ್ಕಳ ತಾ. ಪಂ. ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಜನಾಂಗದವರ ಹಿತರಕ್ಷಣಾ ಹಾಗೂ ಕುಂದುಕೊರತೆ ಸಭೆಗೆ ಪುರಸಭೆಯ ಮುಖ್ಯಾಧಿಕಾರಿ ಸೇರಿದಂತೆ ವಿವಿಧ ಇಲಾಖಾ ಸಭೆಗೆ ಗೈರಾಗಿದ್ದ ಹಿನ್ನೆಲೆ ಸಭೆ ತೊರೆದು ಜನತೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿ

13 Feb 2026
ಕರಾವಳಿ

ತಹಶೀಲ್ದಾರ್‌ ಪ್ರದೀಪ್‌ ಆರ್. ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಮೊದಲು ತಾ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪುರಸಭೆಯ ಮುಖ್ಯಾಧಿಕಾರಿಯ ಅನುಪಸ್ಥಿತಿಯ ಬಗ್ಗೆ ಸೇರಿದ ಜನತೆ ಆಕ್ರೋಶ ವ್ಯಕ್ತಪಡಿಸಿದರು. ಪ.ಜಾ. -ಪ.ಪಂ. ಮುಖಂಡರು ಮೊದಲು ಅಧಿಕಾರಿಗಳಲ್ಲಿನ ಸಮಸ್ಯೆ ಪರಿಹರಿಸಿಕೊಳ್ಳಿ ಆಮೇಲೆ‌‌ ನಮ್ಮನ್ನು ಸಭೆಗೆ ಕರೆಸಿ ಎಂದು ತರಾಟೆಗೆತ್ತಿಕೊಂಡರು. ಅಧಿಕಾರಿಗಳಿಗೆ ನಮ್ಮ ಸಮುದಾಯದ ಬಗ್ಗೆ ಅಸಡ್ಡೆ ಏಕೆ ? ಎಂದು ಪ್ರಶ್ನಿಸಿದ ಅವರು ಹೆಚ್ಚಿನ ಅಧಿಕಾರಿಗಳು ಸಭೆಯಲ್ಲಿರದ ಕಾರಣ ಸಭೆ ತೊರೆದರು.


ಕಾರ್ಕಳ ತಹಶೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ಜ. 13 ರಂದು ನಡೆದ‌ ತಾಲೂಕು ಮಟ್ಟದ ಪ. ಜಾ. ಹಾಗೂ ಪ.ಪಂ. ಜನಾಂಗದವರ ಹಿತರಕ್ಷಣಾ ಹಾಗೂ ಕುಂದುಕೊರತೆ ಪೂರ್ವಭಾವಿ ಸಭೆಯಲ್ಲಿ ಸುಮಾರು 57 ಅಹವಾಲುಗಳು ಬಂದಿದ್ದವು. ಮತ್ತಾವು ಸೇತುವೆ, ಈದು ಗ್ರಾಮದಲ್ಲಿ ಪ.ಜಾ-ಪ.ಪಂ.ದವರ ಜಾಗದ ಸಮಸ್ಯೆ, ನೂರಾಲ್‌ಬೆಟ್ಟಿನಲ್ಲಿ ಮೂಲಸೌಕರ್ಯಗಳ ಕೊರತೆ, ಶಾಲೆಗಳಲ್ಲಿ ಅಕ್ಷರ ದಾಸೋಹ ಸಮಸ್ಯೆ, ಗಣಿ ಇಲಾಖೆ ಸಮಸ್ಯೆ ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಸಮುದಾಯದ ಜನತೆ ಸಭೆಯಲ್ಲಿ ಭಾಗಿಯಾಗಿದ್ದರು. ಆದರೆ, ಮುಖ್ಯವಾಗಿ ಬೇಕಿದ್ದ ಅಧಿಕಾರಿಗಳೇ ಸಭೆಯಲ್ಲಿ ಹಾಜರಿರದ ಕಾರಣ ಅವರು ಸಭೆಯನ್ನು ತೊರೆದರು.


ಸಭೆಗೆ ದೌಡಾಯಿಸಿದ ಅಧಿಕಾರಿಗಳು

ಆರಂಭದಲ್ಲಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸಭೆಯಲ್ಲಿರಲಿಲ್ಲ. ಆದರೆ, ಅವರು ಕೆಲ ಹೊತ್ತಿನ ಬಳಿಕ ಸಭೆಯಲ್ಲಿ ಕಾಣಿಸಿಕೊಂಡರು. ಇಲಾಖಾಧಿಕಾರಿಗಳು ಇಲ್ಲದ ಕುರಿತು ಜನತೆ ಆಕ್ರೋಶಗೊಂಡು ಸಭೆ ಬಹಿಷ್ಕರಿಸಿದ ಮಾಹಿತಿ ತಿಳಿದ ಇತರೆ ಇಲಾಖಾಧಿಕಾರಿಗಳು ಒಬ್ಬೊಬ್ಬರಾಗಿ ಸಭೆಗೆ ಆಗಮಿಸಿದರು.


ಬಳಿಕ ನಡೆದ ಅಧಿಕಾರಿಗಳ ಸಭೆಯಲ್ಲಿ ತಹಶೀಲ್ದಾರ್‌ ಮಾತನಾಡಿ, ಯಾವ ಇಲಾಖೆಯಲ್ಲಿ ಉಪಸ್ಥಿತರಿರಬೇಕಿದ್ದ ಅಧಿಕಾರಿಗಳ ಪರವಾಗಿ ಬೇರೆಯವರು ಹಾಜರಾಗಿದ್ದರೋ ಆ ಇಲಾಖೆಯನ್ನು ಗೈರು ಎಂದು ಪರಿಗಣಿಸಲಾಗುವುದು. ಮತ್ತೊಮ್ಮೆ ಎಲ್ಲಾ ಇಲಾಖೆಗಳಿಗೆ ನೋಟಿಸ್‌ ಕಳುಹಿಸಿ ಮುಂದಿನ ಸಭೆಯ ದಿನವನ್ನು ನಿಗದಿಗೊಳಿಸಲಾಗುವುದು ಎಂದರು.

Recently Updated:

ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..
ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!
ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.*  ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ    *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.* ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.* ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.*
ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.
ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..
ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್. ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್.