ಚಿಕ್ಕಮಗಳೂರಿನಲ್ಲಿ ಕೋಮು ಘರ್ಷಣೆ; ಇಡೀ ನಗರ ಬೂದಿ ಮುಚ್ಚಿದ ಕೆಂಡ. ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.!

17 Feb 2026
ರಾಜ್ಯ

ನಗರದ ವಿಜಯಪುರ ಬಡಾವಣೆಯಲ್ಲಿ ಹಿಂದೂಗಳ ಮನೆ ಮೇಲೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ ಆರೋಪದ ಮೇಲೆ ಕೋಮು ಘರ್ಷಣೆ ಉಂಟಾಗಿದೆ. ಈ ಘಟನೆಯಿಂದಾಗಿ ಎರಡೂ ಕೋಮಿನ ಯುವಕರು ಪೊಲೀಸ್ ಠಾಣೆ ಹಾಗೂ ಆಸ್ಪತ್ರೆ ಮುಂದೆ ಜಮಾಯಿಸಿದ್ದು, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಚಿಕ್ಕಮಗಳೂರು ನಗರದಲ್ಲಿ ಕೋಮು ಘರ್ಷಣೆ ಉಂಟಾಗಿದ್ದು, ಜನರು ರಾತ್ರೋರಾತ್ರಿ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ್ದಾರೆ. ಮಧ್ಯರಾತ್ರಿ ಇಡೀ ಚಿಕ್ಕಮಗಳೂರು ನಗರ ಅಕ್ಷರಶಃ ಬೂದಿ ಮುಚ್ಚಿದ ಕೆಂಡದಂತಾಗಿತ್ತು.

ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಜಯಪುರ ಬಡಾವಣೆಯಲ್ಲಿನ ಹಿಂದೂಗಳ ಮನೆ ಮೇಲೆ ಅನ್ಯಕೋಮಿನ ಐದರಿಂದ ಆರು ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ಕಳೆದ ಮೂರು ದಿನಗಳಿಂದ ಹೆಣ್ಣು ಮಕ್ಕಳ ಹಿಂದೆ ಹೋಗೋದು, ಕಲ್ಲು ಹೊಡೆಯೋದು ಮಾಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ. ಈ ವೇಳೆ ಇಬ್ಬರನ್ನು ಹಿಡಿದ ಹಿಂದೂ ಸಂಘಟನೆಯವರು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದರು.

ಹಲ್ಲೆ ವಿಷಯ ತಿಳಿಯುತ್ತಿದ್ದಂತೆ ಬಸವನಹಳ್ಳಿ ಪೊಲೀಸ್ ಠಾಣೆ ಮುಂದೆ ಎರಡೂ ಕೋಮಿನ ನೂರಾರು ಯುವಕರ ಜಮಾವಣೆಗೊಂಡಿದ್ದರು. ಹಲ್ಲೆಗೊಳಗಾದವರು ಕಲ್ಲು ಹೊಡೆದಿಲ್ಲ. ಹಲ್ಲೆ ನಡೆಸಿದವರ ಮೇಲೆಯೂ ಕಾನೂನು ಕ್ರಮ ಜರುಗಿಸಬೇಕು ಎಂದು ಒಂದು ಕೋಮಿನ ಯುವಕರು ಆಗ್ರಹಿಸಿದ್ದಾರೆ.

ಇತ್ತ ಆಸ್ಪತ್ರೆ ಮುಂದೆಯೂ ನೂರಾರು ಸಂಖ್ಯೆಯಲ್ಲಿ ಜನರು ಸೇರಿದ್ದರು.

ಹಲ್ಲೆಗೊಳಗಾದ ಯುವಕರಿಗೆ ಚಿಕ್ಕಮಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ನೂರಾರು ಸಂಖ್ಯೆಯಲ್ಲಿ ಜನರು ಸೇರುತ್ತಿದ್ದಂತೆ ಅಲರ್ಟ್ ಆದ ಪೊಲೀಸರು, ಎರಡೂ ಕೋಮಿನ ಯುವಕರನ್ನ ಕಳಿಸುವಲ್ಲಿ ಸಕ್ಸಸ್ ಆಗಿದ್ದಾರೆ. ಪೊಲೀಸರ ಭರವಸೆ ನೀಡುತ್ತಿದ್ದಂತೆ ಜನರು ಹಿಂದಿರುಗಿದ್ದಾರೆ.


ಇನ್ನು ಕೆಲ ಯವಕರು ರಾತ್ರಿ ಓಡಾಟ ನಡೆಸಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ವಿಜಯಪುರ ಬಡಾವಣೆಯ ಸುಧಾ ಎಂಬವರ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಇನ್ನು ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ಎಸ್‌ಡಿಪಿಐ ಮುಖಂಡ ಮುನೀರ್, ಹಲ್ಲೆಗೈದ ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.


ವರದಿ: ಸುರೇಶ್ ಗೌಡ

ಚಿಕ್ಕಮಂಗಳೂರು.

Recently Updated:

ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,
ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.
ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ.. ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ..
ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ  ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ  ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.