ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ( ರಿ.,) ಬೆಂಗಳೂರು ವಿಧಾನಸೌಧ ಮಾಧ್ಯಮದವರಿಗೆ ಪ್ರವೇಶ ನಿಬಂಧ- ರಾಜ್ಯ ಸಂಘ ಖಂಡನೆ ಮಾಧ್ಯಮದವರ ಮೇಲೆ ವಿಧಾನಸೌಧ ಪ್ರವೇಶಿಸಲು ನಿಷೇಧ ಹೇರುತ್ತಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಬ್ಬಾಳಿಕೆ.

19 Feb 2026
ರಾಜ್ಯ

ಆಡಳಿತ ಮತ್ತು ಸುಧಾರಣೆ ಇಲಾಖೆಯು ಭದ್ರತಾ ನೆಪವಡ್ಡಿ ಮಾಧ್ಯಮದವರ ಮೇಲೆ ವಿಧಾನಸೌಧ ಪ್ರವೇಶಿಸಲು ನಿಷೇಧ ಹೇರುತ್ತಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಬ್ಬಾಳಿಕೆ ಮಾಡಿದಂತಾಗಿದೆ. ಈ ಆದೇಶದ ನಿರ್ಧಾರವನ್ನು ಕರ್ನಾಟಕ ಮಾಧ್ಯಮ ಪತ್ರಕರ್ತ ಸಂಘವು ತೀವ್ರವಾಗಿ ಖಂಡಿಸುತ್ತಾ ,ಈ ಅದೇಶವನ್ನು ಹಿಂಪಡೇಬೇಕೆಂದು ಸರ್ಕಾರಕ್ಕೆ ಸಂಘ ಒತ್ತಾಯಿಸುತ್ತದೆ.

ಮಾಧ್ಯಮಗಳು ಇಲ್ಲದ ಜಗತ್ತು ಊಹಿಗೂ ನಿಲುಕದ್ದು , ಆರಂಭ ದಿನದಿಂದ ಅವು ನಡೆದು ಬಂದ ದಾರಿ ಒಂದು ರೋಚಕ ಇತಿಹಾಸ, ಬಗೆ ಬಗೆಯ ಸಂಕಷ್ಟಗಳು ಮತ್ತು ಅಡೆತಡೆಗಳ ನಡುವೆ ಜಗತ್ತಿನಲ್ಲಿ ಪತ್ರಿಕೋದ್ಯಮ ಉಳಿದಿರುವುದು ಕಾರಣ ಮಾನವನಿಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಬಗ್ಗೆ ಇರುವ ಅಪಾರ ಆಸಕ್ತಿಯಾಗಿದೆ.

ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ನಡವಳಿಕೆಗಳನ್ನು, ಚಟುವಟಿಕೆಗಳನ್ನು ಜನತೆಗೆ ಶೀಘ್ರವಾಗಿ ಮುಟ್ಟಿಸುವುದು, ಜನತೆಯ ಕುಂದು- ಕೊರತೆ ಆಶೋತ್ತರಗಳನ್ನು, ಅಧಿಕೃತವಾಗಿ ಆಡಳಿತ ವ್ಯವಸ್ಥೆಯ ಗಮನಕ್ಕೆ ತರುವುದು, ಜನತೆ ಹಾಗೂ ಪ್ರಜಾಪ್ರಭುತ್ವದ ಪ್ರಧಾನ ಅಂಗಗಳಿಗೆ ಎರಡು ಕಡೆ ಸಂಚಾರವಿರುವ ಸೇತುವೆಯಾಗಿ ಮಾಧ್ಯಮ ಕರ್ತವ್ಯ ನಿರ್ವಹಿಸುತ್ತಿದೆ.

ಸಮಾಜದ ಅಗೂ- ಹೋಗು, ಅಂಕು-ಡೊಂಕುಗಳನ್ನು ಮಾಧ್ಯಮ ಮೂಲಕ ತಿಳಿಸುವುದು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳು ಕುಶತೊಡಗಿದಾಗ ಅವುಗಳನ್ನು ರಕ್ಷಿಸುವ ಹಾಗೂ ಆಡಳಿತ ಚುಕ್ಕಾಣಿ ಹಿಡಿದವರು ಎಡವಿದಾಗ ನಿರ್ಭಯದಿಂದ, ನಿರ್ಧಾಕ್ಷಿಣ್ಯವಾಗಿ ಎಚ್ಚರಿಸುವುದು ಮಾಧ್ಯಮದ ಜವಾಬ್ದಾರಿ ಅತ್ಯಂತ ಗುರುತರವಾದದ್ದು ಇಂತಹ ಜವಾಬ್ದಾರಿಯ ಹೊಣೆಗಾರಿಕೆಯನ್ನು ಹಲವು ದಶಕಗಳಿಂದಲೂ ನಡೆಸಿಕೊಂಡು ಬರುತ್ತಿದೆ.


ಮಾಧ್ಯಮದ ಮೇಲೆ ನಮ್ಮ ನಮ್ಮನಾಳುವಂತಹ ಸರ್ಕಾರಗಳು ಹಲವಾರು ನಿರ್ಬಂಧಗಳನ್ನು ವಿಧಿಸುತ್ತಿರುವುದು ಸರಿಯಾದ ಕ್ರಮವಲ್ಲ.

ಹಿಂದೆ ವಿಧಾನಸಭಾ ಕಲಾಪಗಳನ್ನು ನೇರ ಪ್ರಸಾರ ಮಾಡುತ್ತಿದ್ದ ಸಂದರ್ಭದಲ್ಲಿ ಚಿತ್ರೀಕರಣ ಮಾಡುವುದನ್ನು ಅಂದಿನ ಬಿಜೆಪಿ ಸರ್ಕಾರ ಚಿತ್ರೀಕರಣಕ್ಕೆ ತಡೆ ಮಾಡಿ ಮಾಧ್ಯಮದವರನ್ನು ಹೊರಗಿಡಲಾಯಿತು. ಇಂದು ಕೂಡ ಅದು ಮುಂದುವರಿಯುತ್ತಿದೆ.

ಇಂದು ಕಾಂಗ್ರೆಸ್ ಸರ್ಕಾರ ಮಾಧ್ಯಮದವರಿಗೆ ವಿಧಾನಸೌಧದಲ್ಲಿ ನಿಗದಿತ ಸ್ಥಳೀಯದಲ್ಲಿ ನಿಂತು ಸುದ್ದಿ ಮಾಡಬೇಕೆಂಬ ಆದೇಶ ಮಾಡಲು ಮುಂದಾಗಿ ಸಂಬಂಧ ಪಟ್ಟ ಇಲಾಖೆಗೆ ನಿಯಮವನ್ನು ಜಾರಿಗೆ ತರಲು ಮುಂದಾಗಿದ್ದು ಸರ್ಕಾರ ಕೂಡಲೇ ಆದೇಶವನ್ನು ಹಿಂಪಡೆಯಬೇಕು ಪತ್ರಕರ್ತರಿಗಿರುವ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕೆಲಸವನ್ನು ಯಾವುದೇ ಸರ್ಕಾರ ಮಾಡೋದು ಸರಿಯಲ್ಲ.

ಕರ್ನಾಟಕ ಮಾಧ್ಯಮ ಪತ್ರಕರ್ತ ಸಂಘವು ಆದೇಶವನ್ನು ಖಂಡಿಸಿ, ಕೂಡಲೇ ವಾಪಸ್ ಪಡೆದು ಪತ್ರಕರ್ತರಿಗೆ ಮುಕ್ತವಾಗಿ ಕೆಲಸ ಮಾಡಲು ಅನುವು ಮಾಡಿಕೊಡಬೇಕೆಂದು ರಾಜ್ಯಾಧ್ಯಕ್ಷ ಜಿ.ಎಂ ರಾಜಶೇಖರ್ ಹಾಗೂ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

Recently Updated:

ಕುಂದಾಪುರದಲ್ಲಿ  ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ  ವೈದ್ಯನ ಅಟ್ಟಹಾಸ.!   ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..ಕುಂದಾಪುರದಲ್ಲಿ ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ ವೈದ್ಯನ ಅಟ್ಟಹಾಸ.! ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..
ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..
ಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್  ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!!  ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್ ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!! ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯ
ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗ
ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ