ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.

20 Feb 2026
ರಾಜ್ಯ

ಶಿವಾಜಿ ಮೆರವಣಿಗೆಯ ವೇಳೆ ಕಲ್ಲು ತೂರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ 8 ಮಂದಿ ಆರೋಪಿಗಳನ್ನು ಬಂಧಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಗೊಯಲ್ ತಿಳಿಸಿದ್ದಾರೆ. ಬಂಧಿತರನ್ನು ತನ್ವೀರ್ ಹವಾಲ್ದಾರ ( 25 ), ಸದ್ದಾಮ್ (22), ಮುಜ್ಜು ಕಮತಗಿ, ಫಯಾಜ್ ಹನುಮಸಾಗರ (24), ಸರ್ಪರಾಜ ಚಾವುಸ್ (33), ರಿಯಾನ್ ಶೇಖ್ (21), ಆಯಾನ್ ಗುಳೇದಗುಡ್ಡ (19) ಮತ್ತು ವಸೀಮ್ ಶೇಖ್ (22) ಎಂದು ಗುರುತಿಸಲಾಗಿದೆ.ಈ ಪ್ರಕರಣದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ಪಿ ಸಿದ್ದಾರ್ಥ್ ಗೋಯಲ್, ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ 8 ಜನರನ್ನು ಬಂಧಿಸಲಾಗಿದೆ. ತಂಜೀರ್ ಎಂಬ ವ್ಯಕ್ತಿಯಿಂದ ಕಲ್ಲು ತೂರಾಟ ನಡೆದಿದೆ. ಡಿಜೆ ಹಾಡಿಗೆ ಹಿಂದೂ ಯುವಕರು ಕುಣಿಯುತ್ತಿದ್ದ ವೇಳೆ ಆರೋಪಿಗಳು ಕಲ್ಲು ಎಸೆದಿದ್ದಾರೆ. ಮಸೀದಿಯಲ್ಲಿ ಶೂ ರ್ಯಾಕ್ಗೆ ಇಡಲಾಗಿದ್ದ ಕಲ್ಲನ್ನು ತೆಗೆದುಕೊಂಡು ಎಸೆದಿದ್ದಾರೆ. ಅಲ್ಲದೆ, ಮಸೀದಿಯಿಂದ ಚಪ್ಪಲಿಯನ್ನು ಸಹ ಎಸೆದಿದ್ದಾರೆ ಎಂದು ತಿಳಿಸಿದರು.


ಮೆರವಣಿಗೆ ನಡೆಯುವ ವೇಳೆ ಯುವಕರು ಮಸೀದಿಯಲ್ಲಿ ಜಮಾವಣೆಗೊಂಡಿದ್ದರು. ಇಬ್ಬರು ಪಿಸಿ ಹಾಗೂ ಓರ್ವ ವ್ಯಕ್ತಿ ಮೇಲೆ ಕಲ್ಲು ಬಿದ್ದಿದೆ. ಈ ಕೇಸ್‌ನಲ್ಲಿ ತಂಜೀರ್ ಎ 1 ಆರೋಪಿ‌ಯಾಗಿದ್ದಾನೆ. ಈತನ ಬಿಟ್ಟು ಬೇರೆ ಯಾರೂ ಕಲ್ಲು ಎಸೆದಿಲ್ಲ. ಸದ್ಯ ತಂಜೀರ್ ಸೇರಿ 8 ಜನರನ್ನ ಬಂದಿಸಲಾಗಿದೆ. ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಬಂಧನ ಮಾಡಲಾಗಿದೆ. ಈ ಘಟನೆಯ ನಂತರವೂ ಮೆರವಣಿಗೆ ಶಾಂತಿಯುತವಾಗಿ ಮುಗಿಯಿತು. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿ ಇದೆ. ಈ ತಪ್ಪಿಗೆ ಕಾರಣವಾದವರ ವಿರುದ್ದ ಕ್ರಮ ಕೈಗೊಳ್ಳುತ್ತೇವೆ ಎಂದು ಸಿದ್ಧರ್ಥ್ ಗೋಯಲ್ ತಿಳಿಸಿದ್ದಾರೆ.


ಕ್ರಮಕ್ಕೆ ಸಿಎಂ ಸೂಚನೆ


ಈ ಘಟನೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಸಿಎಂ, ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ. ಘಟನೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಚರ್ಚಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ, ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ ತಕ್ಕ ಉತ್ತರ ನೀಡುವಂತೆ ಸೂಚನೆ ನೀಡಿದ್ದೇನೆ. ಈಗಾಗಲೇ ಪ್ರಕರಣದ ಸಂಬಂಧ ಕೆಲವು ಆರೋಪಿಗಳನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಘಟನೆಗೆ ಕಾರಣರಾದ ಪ್ರತಿಯೊಬ್ಬರಿಗೂ ಶಿಕ್ಷೆ ನಿಶ್ಚಿತ. ನಾಡಿನ ಜನರಿಗೆ ಭಯಮುಕ್ತ ನೆಮ್ಮದಿಯ ಬದುಕು ನೀಡುವುದು ನಮ್ಮ‌ ಮೊದಲ ಆದ್ಯತೆ. ಜನರ ಶಾಂತಿ - ನೆಮ್ಮದಿಗೆ ಭಂಗ ತರುವ ಯಾವುದೇ ವ್ಯಕ್ತಿ - ಶಕ್ತಿಗಳನ್ನು ನಾವು ಸಹಿಸುವುದಿಲ್ಲ. ಸಾರ್ವಜನಿಕರು ಯಾವುದೇ ಪ್ರಚೋದನೆಗಳಿಗೂ ಕಿವಿಗೊಡದೆ, ಸಂಯಮದಿಂದ ವರ್ತಿಸಿ. ಪೊಲೀಸ್ ಇಲಾಖೆ ತನ್ನ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ಮಾಡಲಿದೆ ಎಂದು ಹೇಳಿದ್ದಾರೆ. ಏನಿದು ಪ್ರಕರಣ?

ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ನಿನ್ನೆ ರಾತ್ರಿ ಸಮುದಾಯದಿಂದ ಹಮ್ಮಿಕೊಂಡಿದ್ದ ಭವ್ಯ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಲಾಯಿತು. ಎಸ್ಪಿ ಸಿದ್ಧಾರ್ಥ್ ಗೋಯಲ್ ಸೇರಿದಂತೆ ಕೆಲವರಿಗೆ ಕಲ್ಲು ಬಡಿದು ಸಣ್ಣಪುಟ್ಟ ಗಾಯಗಳಾದವು. ಈ ಘಟನೆ ಗುರುವಾರ ರಾತ್ರಿ ಬಾಗಲಕೋಟೆಯ ಕಿಲ್ಲಾದ ಪಂಕಾ ಮಸೀದಿ ಬಳಿ ನಡೆಯಿತು. ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಬೆಳಗ್ಗೆ ಜಿಲ್ಲಾಡಳಿತದಿಂದ ಅದ್ದೂರಿಯಾಗಿ ನಡೆಸಲಾಗಿತ್ತು. ಮಧ್ಯಾಹ್ನದ ಬಳಿಕ ಸಮುದಾಯದಿಂದ ಶಿವಾಜಿ ಮಹಾರಾಜರ ಭವ್ಯ ಮೆರವಣಿಗೆ ಸಾಗಿತ್ತು. ಈ ವೇಳೆ ರಾತ್ರಿ ಮೆರವಣಿಗೆ ಪಂಕಾ ಮಸೀದಿ ಮಾರ್ಗದಲ್ಲಿ ಸಾಗುತ್ತಿತ್ತು. ಇದೇ ಸಂದರ್ಭದಲ್ಲಿ ಮಸೀದಿಯಲ್ಲೂ ಸಹ ಪ್ರಾರ್ಥನೆ ನಡೆದಿತ್ತು. ಇದೇ ಪರಿಸ್ಥಿತಿಯನ್ನ ಬಂಡವಾಳ ಮಾಡಿಕೊಂಡ ಕೆಲ ಕಿಡಗೇಡಿಗಳು ಕಲ್ಲು ತೂರಾಟ ನಡೆಸಿದ್ದರಿಂದ ಪರಿಸ್ಥಿತಿ ವಿಕೋಪಕ್ಕೆ ತಿರುಗಿತು. ಈ ವೇಳೆ ನಡೆದ ಕಲ್ಲು ತೂರಾಟದಲ್ಲಿ ಕರ್ತವ್ಯದಲ್ಲಿ ಇದ್ದ ಎಸ್ಪಿ ಸಿದ್ದಾರ್ಥ ಗೋಯಲ್ ಅವರ ಕುತ್ತಿಗೆ ಬಳಿ ತರುಚಿ ಅವರ ಸಮವಸ್ತ್ರದ ಮೇಲೆ ರಕ್ತದ ಕಲೆ ಆಗಿರುವ ವಿಡಿಯೋ ಮತ್ತು ಫೋಟೋಗಳು ಹರಿದಾಡುತ್ತಿವೆ. ಪರಿಸ್ಥಿತಿ ಕೈಮೀರುವ ಮುನ್ನವೇ ಎಸ್ಪಿ ಗೋಯಲ್ ನೇತೃತ್ವದಲ್ಲಿ ಪೊಲೀಸರ ತಂಡ ಪರಿಸ್ಥಿತಿ ತಹಬದಿಗೆ ತಂದಿತು.

Recently Updated:

ಕುಂದಾಪುರದಲ್ಲಿ  ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ  ವೈದ್ಯನ ಅಟ್ಟಹಾಸ.!   ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..ಕುಂದಾಪುರದಲ್ಲಿ ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ ವೈದ್ಯನ ಅಟ್ಟಹಾಸ.! ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..
ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..
ಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್  ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!!  ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್ ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!! ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯ
ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗ
ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ