ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ

07 Mar 2026
ರಾಜ್ಯ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಮಂಗಳೂರು ಇದರ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಯ ರೋಗಿಗಳ ಸೇವೆಗಾಗಿ ಕೊಡುಗೆಯಾಗಿ ನೀಡಿದ ಎಕ್ಸ್ ರೇ ಯಂತ್ರದ ಉದ್ಘಾಟನೆಯನ್ನು ಸಂಸ್ಥೆಯ ಅಧ್ಯಕ್ಷರಾದ ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ನೇವರಿಸಿದರು.

ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಇತ್ತೀಚೆಗೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾ ಸರ್ಜನ್ ಎಕ್ಸ್ ರೇ ಸೇವೆಯಲ್ಲಿ ವ್ಯತ್ಯಯದಿಂದ ರೋಗಿಗಳಿಗೆ ಸಮಸ್ಯೆ ಉಂಟಾಗುತ್ತಿರುವ ಬಗ್ಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಮೀನು ಮಾರಾಟ ಫೆಡರೇಶನ್ ಮೂಲಕ ಜಿಲ್ಲಾಸ್ಪತ್ರೆಗೆ ನೂತನ ಎಕ್ಸ್ ರೇ ಯಂತ್ರವನ್ನು ನೀಡಿದ್ದು, ಇದರಿಂದ ಜಿಲ್ಲಾಸ್ಪತ್ರೆಯಲ್ಲಿ ದಿನನಿತ್ಯ ಚಿಕಿತ್ಸೆಗೆ ಬರುವ ನೂರಾರು ರೋಗಿಗಳಿಗೆ ಸಹಕಾರಿಯಾಗಲಿದೆ ಎಂದರು.


ಸಮಾರಂಭದಲ್ಲಿ ಉಪಸ್ಥಿತರಿದ್ದ ಜಿಲ್ಲಾಸ್ಪತ್ರೆಯ ಸರ್ಜನ್ ಡಾ. ಅಶೋಕ್ ಮಾತನಾಡಿ ಜಿಲ್ಲಾಸ್ಪತ್ರೆಯ ರೋಗಿಗಳ ಸೇವೆಗೆ ಎಕ್ಸ್ ರೇ ಯಂತ್ರವನ್ನು ಮೀನು ಮಾರಾಟ ಫೆಡರೇಶನ್ ವತಿಯಿಂದ ಕೊಡುಗೆಯಾಗಿ ನೀಡಿದ ಶಾಸಕ ಯಶ್ ಪಾಲ್ ಸುವರ್ಣ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರಿಗೆ ಜಿಲ್ಲಾಸ್ಪತ್ರೆಯ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ಹೇಳಿದರು.


ಈ ಸಂದರ್ಭದಲ್ಲಿ ಮೀನು ಮಾರಾಟ ಫೆಡರೇಷನ್ ಉಪಾಧ್ಯಕ್ಷರಾದ ಶ್ರೀ ದೇವಪ್ಪ ಕಾಂಚನ್, ನಿರ್ದೇಶಕರಾದ ಶ್ರೀ ರಾಮಚಂದ್ರ ಕುಂದರ್, ಶ್ರೀ ಸುರೇಶ್ ಸಾಲ್ಯಾನ್, ನಗರಸಭೆ ಮಾಜಿ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ಸದಸ್ಯರಾದ ಶ್ರೀಮತಿ ರಶ್ಮಿ ಸಿ. ಭಟ್, ಶ್ರೀ ಸುಂದರ ಕಲ್ಮಾಡಿ, ಶ್ರೀ ಯೋಗೀಶ್ ಸಾಲ್ಯಾನ್, ಶ್ರೀ ಟಿ. ಜಿ. ಹೆಗ್ಡೆ, ಶ್ರೀ ಹರೀಶ್ ಶೆಟ್ಟಿ, ಶ್ರೀಮತಿ ಎಡ್ಲಿನ್ ಕರ್ಕಡ, ಮೀನುಗಾರ ಮುಖಂಡರಾದ ಶ್ರೀ ದಯಾನಂದ ಸುವರ್ಣ, ಶ್ರೀ ಜಗನ್ನಾಥ ಕಡೆಕಾರ್, ಶ್ರೀ ಸುಭಾಷ್ ಮೆಂಡನ್, ಶ್ರೀ ಸತೀಶ್ ಕುಂದರ್, ಶ್ರೀ ನಾಗರಾಜ ಸುವರ್ಣ, ಶ್ರೀ ರತ್ನಾಕರ ಸಾಲ್ಯಾನ್, ಶ್ರೀ ಸುಂದರ ಸಾಲ್ಯಾನ್, ಶ್ರೀ ವಿನಯ ಕರ್ಕೇರ, ಶ್ರೀ ಕರುಣಾಕರ ಸಾಲ್ಯಾನ್, ಶ್ರೀ ನಾಗರಾಜ ಕುಂದರ್, ಶ್ರೀ ಮಿಥುನ್ ಕುಂದರ್, ಶ್ರೀ ಕೃಷ್ಣ ಕೋಟ್ಯಾನ್, ಶ್ರೀಮತಿ ಗೀತಾ ಕರ್ಕೇರ, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ದಿನೇಶ್ ಅಮೀನ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ಶ್ರೀ ರಾಜೀವ್ ಕುಲಾಲ್, ಪ್ರಮುಖರಾದ ಶ್ರೀ ಸುನೀಲ್ ನೇಜಾರು, ಶ್ರೀ ಸುಭಾಷಿತ್, ಶ್ರೀ ರಾಘವೇಂದ್ರ ಆಚಾರ್ಯ, ಶ್ರೀಮತಿ ಸುನೀತಾ ಭಂಡಾರಿ, ಶ್ರೀ ಸುಧಾಕರ ಪ್ರಭು, ಉಡುಪಿ ಜಿಲ್ಲಾಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ. ವಾಸುದೇವ, ವೈದ್ಯರಾದ ಡಾ. ಆಮ್ನ ಮೊದಲಾದವರು ಉಪಸ್ಥಿತರಿದ್ದರು.*

Recently Updated:

ಕುಂದಾಪುರದಲ್ಲಿ  ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ  ವೈದ್ಯನ ಅಟ್ಟಹಾಸ.!   ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..ಕುಂದಾಪುರದಲ್ಲಿ ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ ವೈದ್ಯನ ಅಟ್ಟಹಾಸ.! ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..
ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..
ಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್  ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!!  ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್ ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!! ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯ
ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗ
ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ