ನಿರ್ದಿಷ್ಟ ಸಮಯದಲ್ಲಿ, ಸಾಂದರ್ಭಿಕವಾಗಿ ಆರೋಗ್ಯ ತಪಾಸಣೆ ಅವಶ್ಯ - ಸುನಿಲ್‌ ಕುಮಾರ್‌.

22 Mar 2026
ಕರಾವಳಿ

ಕಾರ್ಕಳ : ಸ್ವಾಸ್ಥ್ಯ ಸಮಾಜವಿದ್ದಲ್ಲಿ ಎಲ್ಲವೂ ಸಾಧ್ಯ. ಆದರೆ, ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸಮಸ್ಯೆಯಿಂದಾಗಿ ಸಾವನ್ನಪ್ಪುತ್ತಿರುವವರಲ್ಲಿ ಯುವಕರ ಸಂಖ್ಯೆ ಹೆಚ್ಚುತ್ತಿರುವುದು ಆತಂಕಕಾರಿ. ಆದ್ದರಿಂದ ದೈನಂದಿನ ಕಾರ್ಯಚಟುವಟಿಕೆಯ ಜೊತೆ ಜೊತೆಗೆ ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಅವಶ್ಯವಾಗಿ ಮಾಡಿಸಿಕೊಳ್ಳಬೇಕು ಎಂದು ಶಾಸಕ ವಿ. ಸುನಿಲ್‌ ಕುಮಾರ್‌ ಹೇಳಿದರು.


ಅವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಕಾರ್ಕಳ ವಲಯದ ವತಿಯಿಂದ ಕೆಎಂಸಿ ಮಣಿಪಾಲ ಆಸ್ಪತ್ರೆಯ ಸಹಯೋಗದಲ್ಲಿ ದಿ. ಜಯಕರ ಸುವರ್ಣ (ಆಶಾ ಸ್ಟುಡಿಯೋ ಬಜಗೋಳಿ) ಸ್ಮರಣಾರ್ಥ ಮಾ. 22ರಂದು ಬಜಗೋಳಿ ಸಭಾಭವನದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಈ ಭಾಗದ ಶುಭ ಸಮಾರಂಭಗಳಲ್ಲಿ ಜಯಕರ ಸುವರ್ಣ ಅವರ ಪಾತ್ರ ಮಹತ್ವದ್ದಾಗಿತ್ತು. ಇಂದು ಅವರ ಸ್ವರಣಾರ್ಥವಾಗಿ ಎಸ್‌ಕೆಪಿಎ ಉಚಿತವಾಗಿ ಆರೋಗ್ಯ ತಪಾಸಣೆ ಕಾರ್ಯಕ್ರಮ ಕೈಗೊಂಡಿರುವುದು ಶ್ಲಾಘನೀಯ ಎಂದರು.


ಸನ್ಮಾನ

ಕಾರ್ಯಕ್ರಮದಲ್ಲಿ ಸ್ವಚ್ಛ ಬ್ರಿಗೇಡ್ ಬಜಗೋಳಿ ತಂಡ ಹಾಗೂ ದಿ. ಜಯಕರ ಸುವರ್ಣ ಅವರ ಧರ್ಮಪತ್ನಿ ಶಾಂತಾ ಜಯಕರ್‌ ಸುವರ್ಣ ಅವರನ್ನು ಅಭಿನಂದಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್‌ಕೆಪಿಎ ಕಾರ್ಕಳ ವಲಯ ಅಧ್ಯಕ್ಷ ಪ್ರಮೋದ್‌ಚಂದ್ರ ಪೈ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಬಜಗೋಳಿ ಆರೋಗ್ಯ ಕ್ಲಿನಿಕ್‌ನ ಡಾ. ಎ.ಕೆ. ವೆಂಕಟಗಿರಿ ರಾವ್, ಅಶ್ವಿನಿ ಕ್ಲಿನಿಕ್‌ನ ಡಾ. ರಾಮದಾಸ್‌ ಹೆಗ್ಡೆ, ಮುಡ್ರಾಲು ಆಶಾನಿಕೇತನದ ಶಾಂತಾ ಜಯಕರ್‌ ಸುವರ್ಣ, ಬಜಗೋಳಿ ಶ್ರೀ ಗಣಪತಿ ಸೇವಾ ಸಮಿತಿಯ ಅಧ್ಯಕ್ಷ ಕೆ. ದೇವಿದಾಸ್‌ ಪ್ರಭು, ನಲ್ಲೂರು ಮೈತ್ರಿ ಯವ ವೇದಿಕೆ ಅಧ್ಯಕ್ಷ ಜಯರಾಮ್‌ ಶೆಟ್ಟಿ, ಬಜಗೋಳಿ ಅಬ್ಬೆಂಜಾಲು ಫ್ರೆಂಡ್ಸ್‌ ಕ್ಲಬ್‌ ಅಧ್ಯಕ್ಷ ಸಂದೀಪ್‌ ಶೆಟ್ಟಿ, ಕೆರ್ವಾಶೆ ಯುವಜನ ವೇದಿಕೆ ಅಧ್ಯಕ್ಷ ಜೀವನ್‌ ಕುಮಾರ್‌, ಮಾಳ ಗೆಳೆಯರ ಬಳಗದ ಅಧ್ಯಕ್ಷ ನಂದು ಗೋಪನ್‌ ಕೆ. ಆರ್.‌, ಎಸ್‌ಕೆಪಿಎ ಉಡುಪಿ-ದ.ಕ. ಜಿಲ್ಲಾ ಉಪಾಧ್ಯಕ್ಷ ದತ್ತಾತ್ರೇಯ, ನಿಕಟಪೂರ್ವ ಅಧ್ಯಕ್ಷ ಪದ್ಮಪ್ರಸಾದ್‌ ಜೈನ್‌, ಕಾರ್ಕಳ ವಲಯ ಗೌರವಾಧ್ಯಕ್ಷ ಸುಶೀಲ್‌ ಕುಮಾರ್‌ ಟಿ.ವಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಸಾದ್‌ ಐಸಿರ ಕಾರ್ಯಕ್ರಮ ನಿರೂಪಿಸಿ, ಶೇಖರ್‌ ಕುಕ್ಕುಜೆ ವಂದಿಸಿದರು.


ವರದಿ: ಪ್ರವೀಣ್ ಕುಲಾಲ್


Recently Updated:

ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..
ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!
ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.*  ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ    *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.* ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.* ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.*
ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.
ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..
ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್. ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್.