ಕಾರ್ಕಳ: ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿದ ಐವರು ಕ್ರಿಕೆಟ್ ಬೆಟ್ಟಿಂಗ್ ಬುಕ್ಕಿಗಳ ಬಂಧನ

30 Mar 2026
ಕರಾವಳಿ

ಕರ್ತವ್ಯನಿರತ ಪೊಲೀಸ್ ಅಧಿಕಾರಿಗಳ ಮೇಲೆ ಕಾರು ಹರಿಸಲು ಯತ್ನಿಸಿ ಕೊಲೆ ಯತ್ನ ನಡೆಸಿದ ಹಾಗೂ ಸಂಘಟಿತ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಡೂರು ನಿವಾಸಿ ಸುದರ್ಶನ ಶೆಟ್ಟಿ (29), ಕೃತವ್ಯ ಶೆಟ್ಟಿ (27), ಅರುಣ್ ಶೆಟ್ಟಿ (29), ತೇಜಸ್ (28) ಮತ್ತು ಪ್ರಜ್ವಲ್ ಶೆಟ್ಟಿ (29) ಬಂಧಿತರು.


ಕಾರ್ಕಳದ ಹಂಚಿಕಟ್ಟೆ ಬಳಿ ತಪಾಸಣೆ ನಡೆಸುತ್ತಿದ್ದ ಪಿಎಸ್‌ಐ ಪ್ರಸನ್ನ ಎಂ.ಎಸ್. ಅವರ ತಂಡ ಕಪ್ಪು ಬಣ್ಣದ ಕಾರನ್ನು ನಿಲ್ಲಿಸಲು ಸೂಚಿಸಿದಾಗ, ಆರೋಪಿಗಳು ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿ ಪರಾರಿಯಾಗಿದ್ದರು. ಇದೇ ವಾಹನ ವನ್ನು ಶಿರ್ವ ಗ್ರಾಮದ ಪದವು ಬಳಿ ತಡೆದ ಪಿಎಸ್‌ಐ ಮಂಜುನಾಥ ಮರಬಾಡ ಅವರ ಮೇಲೂ ಚಾಲಕ ಕಾರು ಹತ್ತಿಸಲು ಯತ್ನಿಸಿದ್ದಾನೆ. ಅಂತಿಮವಾಗಿ ಶಿರ್ವ ಪಟ್ಟಣದಲ್ಲಿ ಪೊಲೀಸರು ಹರಸಾಹಸ ಪಟ್ಟು ವಾಹನವನ್ನು ತಡೆದು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.ಬಂಧಿತರನ್ನು ವಿಚಾರಣೆ ನಡೆಸಿದಾಗ ಇವರು ದೊಡ್ಡ ಮಟ್ಟದ ಕ್ರಿಕೆಟ್ ಬೆಟ್ಟಿಂಗ್ ಜಾಲದಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ. ಸಾರ್ವಜನಿಕರಿಗೆ ಹಣದ ಆಮಿಷವೊಡ್ಡಿ ಜೂಜಾಟಕ್ಕೆ ಪ್ರೇರೇಪಿಸುತ್ತಿದ್ದ ಈ ತಂಡದ ವಿರುದ್ಧ ಕಾರ್ಕಳ ಮತ್ತು ಶಿರ್ವ ಪೊಲೀಸ್ ಠಾಣೆಗಳಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಮತ್ತು ಕರ್ನಾಟಕ ಪೊಲೀಸ್ ಕಾಯ್ದೆಯಡಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

Recently Updated:

ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..
ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!
ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.*  ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ    *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.* ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.* ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.*
ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.
ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..
ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್. ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್.