ಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್ ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!! ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯ

03 Aug 2026
ರಾಜ್ಯ

ಇದರಿಂದ ಮತ್ತೊಬ್ಬ ಲಿಂಗಾಯತ ಮುಖಂಡ ಸಚಿವರಾಗಿ ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಇನ್ನೊಂದೆಡೆ ವಿಧಾನ ಪರಿಷತ್ ಸದಸ್ಯೆ ಗಾಯಿತ್ರಿ ಅವರ ಬದಲಾಗಿ ಉಮಾಶ್ರೀ ಅವರನ್ನು ಸಚಿವರನ್ನಾಗಿ ಆಯ್ಕೆ ಮಾಡಬೇಕೆಂಬ ಒತ್ತಡ ಹೆಚ್ಚಾಗುತ್ತಿದೆ. ವರಿಷ್ಠರು ಇದಕ್ಕೆ ಒಪ್ಪುತ್ತಾರಾ ಎನ್ನುವುದನ್ನು ಕಾದುನೋಡಬೇಕಾಗಿದೆ.


ತನ್ವೀರ್ ಸೇಠ್ ಆಕ್ರೋಶ


ಸಿಎಂ ಡಿಕೆ ಶಿವಕುಮಾರ್ ಅವರ ಕ್ಯಾಬಿನೆಟ್ ನಲ್ಲಿ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮೈಸೂರು ಭಾಗದ ಹಿರಿಯ ಮುಖಂಡ ಮತ್ತು ಶಾಸಕ ತನ್ವೀರ್ ಸೇಠ್, ನನ್ನ ಮುಂದಿನ ನಡೆ ಕಾರ್ಯಕರ್ತರ ತೀರ್ಮಾನಕ್ಕೆ ಬದ್ದ ಎಂದಿದ್ದಾರೆ.


ನಾನು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದೇ, ಆದರೆ, ಹೈಕಮಾಂಡ್ ನೀಡಿದ್ದ ಭರವಸೆ ಹುಸಿಯಾಗಿದೆ. ನಾನು ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿ ನನ್ನ ಮುಂದಿನ ನಿರ್ಧಾರವನ್ನು ಪ್ರಕಟಿಸಲಾಗುವುದು ಎಂದು ತನ್ವೀರ್ ಸೇಠ್ ಮೈಸೂರಿನಲ್ಲಿ ತಿಳಿಸಿದ್ದಾರೆ.

ಸಚಿವ ಸ್ಥಾನ ಸಿಗಲಿದೆ ಎಂದು ಕಾಯುತ್ತಿದ್ದ ನಾಯಕರಿಗೆ ನಿರಾಸೆ; ಕೊನೆ ಕ್ಷಣದಲ್ಲಿ ಬದಲಾದ ಲೆಕ್ಕಾಚಾರ, ಡಿಕೆಶಿ ಸಂಪುಟದಲ್ಲಿ ಯಾರಿಗೆ ಶಾಕ್?

ನಾನು ಯಾರ ವಿರುದ್ದವೂ ವೈಯಕ್ತಿಕವಾಗಿ ಮಾತನಾಡುವುದಿಲ್ಲ, ಅದಕ್ಕೂ ಒಂದು ಕಾಲ ಬರುತ್ತದೆ. ನನ್ನ ಕೋಪ, ನೋವು ಮತ್ತು ಬೇಸರವನ್ನು ಯಾವುದೇ ಪದಗಳಲ್ಲಿ ವ್ಯಕ್ತಪಡಿಸದೆ ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಕೆಲಸ ಮಾಡಿಕೊಂಡಿದ್ದೇನೆ. ಈಗಲೂ ಬೇಸರದಲ್ಲಿ ಯಾರ ವಿರುದ್ದವೂ ನಾನು ಮಾತನಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.


ನನಗೆ ಯಾವುದೇ ರೀತಿಯ ನಿಗಮ ಮಂಡಳಿ ಸ್ಥಾನವೂ ಬೇಡ ಎಂದು ಈ ಹಿಂದೆಯೂ ಹೇಳಿದ್ದೆ, ಈಗಲೂ ನನಗೆ ನಿಗಮ ಮಂಡಳಿ ಸ್ಥಾನ ಬೇಡ, ದೆಹಲಿಗೆ ಹೋಗಿ ಲಾಬಿ ಮಾಡಲ್ಲ, ಈಗಲೂ ಮಾಡಲ್ಲ, ನನಗೆ ಯಾರಿಂದ ಸಚಿವ ಸ್ಥಾನ ತಪ್ಪಿಗೆ ಎನ್ನುವುದನ್ನು ಮುಂದಿನ ದಿನಗಳಲ್ಲಿ ಬಹಿರಂಗಪಡಿಸುತ್ತೇನೆ ಎಂದು ಹೇಳಿದ್ದಾರೆ.


ಆಕಾಂಕ್ಷಿತ ಶಾಸಕರ ಬೆಂಬಲಿಗರಿಂದ ಭುಗಿಲೆದ್ದ ಆಕ್ರೋಶ


ಸಚಿವ ಸ್ಥಾನ ದೊರೆಯದೇ ಇದ್ದ ಕಾರಣ ಗೋವಿಂದರಾಜ ನಗರದ ಶಾಸಕ ಪ್ರಿಯಾ ಕೃಷ್ಣ ಅವರ ಬೆಂಬಲಿಗರು ಆಕ್ರೋಶ ವ್ಯಕ್ತಪಿಸಿದ್ದಾರೆ. ಪ್ರತಿಭಟನೆ ನಡೆಸಿದ ಪ್ರಿಯಾ ಕೃಷ್ಣ ಅವರ ಬೆಂಬಲಿಗರು, ರಾಜ್ಯಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ವಿಜಯಪುರದಲ್ಲಿ ಮತ್ತೊಂದು ಸ್ಥಾನ ಸಿಗಬೇಕಿತ್ತು ಎಂಬ ಪ್ರಶ್ನೆಗೆ


ಅಸಮಾಧಾನ ಹೊರಹಾಕಿದ ಅಪ್ಪಾಜಿ ನಾಡಗೌಡ


ನಮ್ಮಲ್ಲಿ ಜಗದ್ಗುರು ಗಳು ಇದ್ದಾರೆಂದು ಅವರದ್ದೇ ಎಲ್ಲಾವೂ ನಡೆಯುತ್ತೆ ಎಂದು ತಮ್ಮ ಅಸಮಾಧಾನ ಹೊರ ಹಾಕಿದ ಅಪ್ಪಾಜಿ ನಾಡಗೌಡ.


ಸಚಿವ ಸ್ಥಾನ ಕೈತಪ್ಪಿದಕ್ಕೆ ಯಶವಂತ್ ರಾಯ್ ಪಾಟೀಲ್ ಬೆಂಬಲಿಗರಿಂದ ಪ್ರತಿಭಟನೆ ನಡೆಸಿದರು. ಶಾಸಕರ ಭವನದಲ್ಲಿ ಪ್ರತಿಭಟನೆ ಮಾಡುತ್ತಿರುವ ಬೆಂಬಲಿಗರು. ವಿಜಯಪುರ ಜಿಲ್ಲೆ ಇಂಡಿ ಕ್ಷೇತ್ರದ ಶಾಸಕ ಯಶವಂತ ರಾಯ್ ಪಾಟೀಲ್. ಮೂರು ಭಾರಿ ಶಾಸಕರಾಗಿ ಆಯ್ಕೆ ಆಗಿರುವ ಯಶವಂತ್ ರಾಯ್ ಪಾಟೀಲ್, ತಮ್ಮ ನಾಯಕರಿಗೆ ಸಚಿವ ಸ್ಥಾನ ತಪ್ಪಿದ್ದಕ್ಕೆ ಯಶವಂತ್ ರಾಯ್ ಫೋಟೋ ಹಿಡಿದು ಪ್ರತಿಭಟನೆ. ಪ್ರತಿಭಟನೆ ಜಾಗದಲ್ಲಿ ಅಹಿತಕರ ಘಟನೆ ನಡೆಯದಂತೆ ಪೊಲೀಸರಿಂದ ಬಿಗಿ ಭದ್ರತೆ.


ಇದಲ್ಲದೆ, ಸಚಿವಕಾಂಕ್ಷಿಗಳಾಗಿದ್ದ ಸಾಕಷ್ಟು ಶಾಸಕರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದು, ಅವರ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಅಸಮಾಧಾನವನ್ನು ಸಿಎಂ ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಯಾವ ರೀತಿಯಲ್ಲಿ ನಿಯಂತ್ರಣಕ್ಕೆ ತರಲಿದ್ದಾರೆ ಎನ್ನುವುದು ಮಾತ್ರ ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.

Recently Updated:

ಕುಂದಾಪುರದಲ್ಲಿ  ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ  ವೈದ್ಯನ ಅಟ್ಟಹಾಸ.!   ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..ಕುಂದಾಪುರದಲ್ಲಿ ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ ವೈದ್ಯನ ಅಟ್ಟಹಾಸ.! ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..
ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..
ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗ
ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,