ಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗ

03 Aug 2026
ರಾಜ್ಯ

ಇಂದು ಬೆಳಗ್ಗೆ ದೆಹಲಿಯಲ್ಲಿ ನಡೆದ ಕಾಂಗ್ರೆಸ್‌‍ ವರಿಷ್ಠ ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಮನೆಯಲ್ಲಿ ಸಭೆ ಸೇರಿದರು. ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್‌, ರಣದೀಪ್‌ ಸಿಂಗ್‌ ಸುರ್ಜೇವಾಲ ಅವರು ಸಭೆ ನಡೆಸಿ ಅಂತಿಮ ಸುತ್ತಿನ ಚರ್ಚೆಯ ಬಳಿಕ ನೂತನ ಸಚಿವರ ಪಟ್ಟಿಯನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ರವಾನಿಸಿದ್ದಾರೆ.


ಜೂನ್‌ 3ರಂದು ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಿದರು. ಅವರ ಜೊತೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಸೇರಿದಂತೆ ಇತರ 12 ಮಂದಿ ಸಚಿವ ಸಂಪುಟ ಸೇರಿದ್ದರು. ಇಂದಿಗೆ ಬರೋಬರಿ ಎರಡು ತಿಂಗಳಾಗಿದೆ. ಕಳೆದ 20 ದಿನಗಳಿಂದಲೂ ಸಂಪುಟ ವಿಸ್ತರಣೆಗಾಗಿ ಬೆಂಗಳೂರು, ದೆಹಲಿಯಲ್ಲಿ ನಾನಾ ರೀತಿಯ ಕಸರತ್ತುಗಳಾಗಿವೆ. ಕಳೆದ ಜೂನ್‌ 30ರಂದು ಕಾಂಗ್ರೆಸ್‌‍ ಹೈಕಮಾಂಡ್‌ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ ಅವರನ್ನು ದೆಹಲಿಗೆ ಕರೆಸಿಕೊಂಡು ಚರ್ಚೆ ನಡೆಸಿತ್ತು.


ಆದರೆ ಪಟ್ಟಿಯನ್ನು ಅಖೈರುಗೊಳಿಸದೇ ಸೋಮವಾರ ಕಳುಹಿಸುವುದಾಗಿ ತಿಳಿಸಿತ್ತು. ಅದರಂತೆ ಬೆಂಗಳೂರಿನ ಲೋಕಭವನದಲ್ಲಿ ಪ್ರಮಾಣವಚನ ಸ್ವೀಕಾರಕ್ಕೆ ಎಲ್ಲಾ ತಯಾರಿಗಳಾಗಿವೆ. ಆದರೆ ನೂತನ ಸಚಿವರ ಪಟ್ಟಿಯೇ ಸಿದ್ಧವಿರಲಿಲ್ಲ ಮತ್ತು ಸಚಿವರಾಗುವವರಿಗೂ ಯಾವುದೇ ಮಾಹಿತಿ ಇರಲಿಲ್ಲ. ಆದರೆ ಸುಮಾರು 11 ಗಂಟೆ ವೇಳೆಗೆ ಹೈಕಮಾಂಡ್‌ ಪಟ್ಟಿ ರವಾನಿಸಿದ್ದು, ಅದನ್ನು ಮುಖ್ಯಮಂತ್ರಿಯವರು ಮುಖ್ಯ ಕಾರ್ಯದರ್ಶಿಯವರ ಮೂಲಕ ರಾಜ್ಯಪಾಲರಿಗೆ ತಲುಪಿಸಿದ್ದಾರೆ.


ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇಂದು ತಮೆಲ್ಲಾ ಕಾರ್ಯಕ್ರಮಗಳನ್ನು ಬದಿಗಿರಿಸಿ ಸಚಿವ ಸಂಪುಟ ವಿಸ್ತರಣೆಯ ಕುರಿತು ಹೈಕಮಾಂಡ್‌ ಜೊತೆ ನಿರಂತರವಾಗಿ ಚರ್ಚೆ ನಡೆಸುತ್ತಿದ್ದರು. ತೀವ್ರ ಒತ್ತಡದಿಂದಾಗಿ ಕೊನೆಗೂ ವರಿಷ್ಠರು ಸಚಿವರ ಪಟ್ಟಿಯನ್ನು ಅಖೈರುಗೊಳಿಸಿದ್ದಾರೆ. ಇದೇ ವೇಳೆ ವಿಧಾನಪರಿಷತ್‌ ಸದಸ್ಯೆ ಗಾಯತ್ರಿ ಶಾಂತೇಗೌಡರಿಗೂ ಅದೃಷ್ಟ ಖುಲಾಯಿಸಿದೆ. ವಿಧಾನಸಭೆಯ ಅಧ್ಯಕ್ಷ ಸ್ಥಾನಕ್ಕೆ ಜಿ.ಎಸ್‌‍.ಪಾಟೀಲ್‌, ಉಪಾಧ್ಯಕ್ಷ ಸ್ಥಾನಕ್ಕೆ ಎ.ಎಸ್‌‍.ಪೊನ್ನಣ್ಣ ಅವರನ್ನು ಆಯ್ಕೆ ಮಾಡಲಾಗಿದೆ.


ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಸಲೀಂ ಅಹಮದ್‌ ಅವರನ್ನು ಉಪಾ ಸಭಾಪತಿ ಸ್ಥಾನಕ್ಕೆ ಉಮಾಶ್ರೀ ಅವರನ್ನು ನೇಮಿಸಲು ಹೈಕಮಾಂಡ್‌ ಅನುಮತಿಸಿದೆ.ಈ ಬಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಬಹುತೇಕ ಹೊಸ ಮುಖಗಳಿಗೆ ಹಾಗೂ ಯುವ ಉತ್ಸಾಹಿಗಳಿಗೆ ಆದ್ಯತೆ ನೀಡಲಾಗಿದೆ.


ಸಂಭವನೀಯ ಸಚಿವರ ಪಟ್ಟಿ ಈ ರೀತಿ ಇದೆ:

ಪಿ.ಎಂ.ನರೇಂದ್ರಸ್ವಾಮಿ-ಮಳವಳ್ಳಿ

ಶಿವರಾಜ ತಂಗಡಗಿ-ಕನಕಗಿರಿ

ರುದ್ರಪ್ಪ ಲಮಾಣಿ- ಹಾವೇರಿ

ಕೆ.ಎಸ್‌‍.ಬಸವಂತಪ್ಪ-ಮಾಯಕೊಂಡ

ಬಿ.ನಾಗೇಂದ್ರ-ಬಳ್ಳಾರಿ

ಟಿ.ರಘುಮೂರ್ತಿ-ಚಳ್ಳಕೆರೆ

ಬಿ.ಜೆಡ್‌.ಜಮೀರ್‌ ಅಹಮದ್‌ ಖಾನ್‌-ಚಾಮರಾಜಪೇಟೆ

ರಿಜ್ವಾನ್‌ ಅರ್ಷದ್‌-ಶಿವಾಜಿನಗರ

ಸಂತೋಷ್‌ಲಾಡ್‌-ಕಲಗಟಗಿ

ಮಧುಬಂಗಾರಪ್ಪ-ಸೊರಬ

ಪುಟ್ಟರಂಗಶೆಟ್ಟಿ-ಚಾಮರಾಜನಗರ

ಎಸ್‌‍.ಎಸ್‌‍.ಮಲ್ಲಿಕಾರ್ಜುನ್‌-ದಾವಣಗೆರೆ ಉತ್ತರ

ಅಜಯ್‌ಸಿಂಗ್‌-ಜೇವರ್ಗಿ

ಎನ್‌.ಚೆಲುವರಾಯಸ್ವಾಮಿ-ನಾಗಮಂಗಲ

ಕೆ.ಎಂ.ಶಿವಲಿಂಗೇಗೌಡ-ಅರಸೀಕೆರೆ

ಎಚ್‌.ಸಿ.ಬಾಲಕೃಷ್ಣ-ಮಾಗಡಿ

ಗಾಯಿತ್ರಿ ಶಾಂತೇಗೌಡ-ವಿಧಾನ ಪರಿಷತ್‌ ಸದಸ್ಯೆ

ಬಸವರಾಜರಾಯರೆಡ್ಡಿ- ಯಲಬುರಗಿ

ವಿಜಯಾನಂದ ಕಾಶಪ್ಪನವರ್‌-ಹುನಗುಂದ

ಲಕ್ಷ್ಮಣ ಸವದಿ-ಅಥಣಿ


ಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗೂ ಏಕಕಾಲಕ್ಕೆ ಸಂಪುಟ ವಿಸ್ತರಣೆಯಾಗಲಿದೆ.

Recently Updated:

ಕುಂದಾಪುರದಲ್ಲಿ  ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ  ವೈದ್ಯನ ಅಟ್ಟಹಾಸ.!   ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..ಕುಂದಾಪುರದಲ್ಲಿ ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ ವೈದ್ಯನ ಅಟ್ಟಹಾಸ.! ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..
ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..
ಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್  ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!!  ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್ ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!! ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯ
ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,