ಬೈಂದೂರು: ಮರವಂತೆ ಶ್ರೀ ವರಾಹಸ್ವಾಮಿ ಕ್ಷೇತ್ರದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಭಕ್ತರ ಆಕ್ರೋಶ ಕುಡಿಯುವ ನೀರು ಮತ್ತು ಶೌಚಾಲಯ ಬಂದ್.!

13 Aug 2026
ಕರಾವಳಿ

ಬೈಂದೂರು: ಕರಾವಳಿಯ ಪ್ರಸಿದ್ಧ ಕಾರ್ಮಿಕ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸಂಗಮದಲ್ಲಿರುವ *ಮರವಂತೆಯ ಶ್ರೀ ವರಾಹಸ್ವಾಮಿ ದೇವಸ್ಥಾನ ದಲ್ಲಿ ಪ್ರತಿ ವರ್ಷ ವಿಜೃಂಭಣೆಯಿಂದ ನಡೆಯುವ ಕರ್ಕಾಟಕ ಅಮಾವಾಸ್ಯೆ - ಭೀಮನ ಅಮಾವಾಸ್ಯೆ ಜಾತ್ರಾ ಮಹೋತ್ಸವ ದಲ್ಲಿ ಈ ಬಾರಿ ಭಾರೀ ಅವ್ಯವಸ್ಥೆ ಕಂಡುಬಂದಿದ್ದು, ಆಗಮಿಸಿದ ಸಾವಿರಾರು ಭಕ್ತರು ಮತ್ತು ಸ್ಥಳೀಯರು ಆಡಳಿತ ಮಂಡಳಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಜಾತ್ರೆಯಲ್ಲಿ ಕಂಡುಬಂದ ಪ್ರಮುಖ ಅವ್ಯವಸ್ಥೆಗಳು:


ಕಗ್ಗತ್ತಲೆಯಲ್ಲಿ ದೇವಾಲಯ

ವರ್ಷಕ್ಕೊಮ್ಮೆ ನಡೆಯುವ ಪವಿತ್ರ ಜಾತ್ರೆಗೆ ದೇವಾಲಯ ಮತ್ತು ಸುತ್ತಮುತ್ತಲಿನ ಆವರಣಕ್ಕೆ ಸೂಕ್ತ ವಿದ್ಯುತ್ ದೀಪಾಲಂಕಾರ ಮಾಡದೆ ಸಂಪೂರ್ಣ ನಿರ್ಲಕ್ಷ್ಯ ವಹಿಸಲಾಗಿತ್ತು. ರಾತ್ರಿ ಹೊತ್ತಿನಲ್ಲಿ ಭಕ್ತರು ಕತ್ತಲಲ್ಲಿ ಕಂಗಾಲಾದರು.


ಕುಡಿಯುವ ನೀರು ಮತ್ತು ಶೌಚಾಲಯ ಬಂದ್

ದೂರದಿಂದ ದರ್ಶನಕ್ಕೆ ಬಂದ ಭಕ್ತರಿಗೆ ಕನಿಷ್ಠ ಕುಡಿಯುವ ನೀರಿನ ವ್ಯವಸ್ಥೆಯೂ ಇರಲಿಲ್ಲ.

ಇದ್ದ ಶೌಚಾಲಯಗಳಿಗೂ ಬೀಗ ಹಾಕಲಾಗಿತ್ತು. ಇದರಿಂದ ಮಹಿಳೆಯರು, ವೃದ್ಧರು ಮತ್ತು ಮಕ್ಕಳು ತೀವ್ರ ಪರದಾಟ ಅನುಭವಿಸಿದರು.


ಪ್ರವಾಸೋದ್ಯಮ ಇಲಾಖೆ ಜಾಗದಲ್ಲಿ ವಸೂಲಿ*

ಪ್ರವಾಸೋದ್ಯಮ ಇಲಾಖೆಗೆ ಸೇರಿದ ಸರ್ಕಾರಿ ಜಾಗದಲ್ಲಿ ವ್ಯಾಪಾರಸ್ಥರಿಂದ ಅನಧಿಕೃತವಾಗಿ ಜಾಗದ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ.


ಭಕ್ತರ.?

ಲಕ್ಷಾಂತರ ರೂಪಾಯಿ ಹುಂಡಿ ಸಂಗ್ರಹವಾಗುವ ಈ ಕ್ಷೇತ್ರದಲ್ಲಿ ಮೂಲಭೂತ ಸೌಲಭ್ಯ ನೀಡಲು ಯಾಕೆ ಆಗಲ್ಲ? ವರ್ಷಕ್ಕೊಮ್ಮೆ ಬರುವ ಜಾತ್ರೆಗೆ ಇದೇನಾ ನಾವು ಕೊಡುವ ಗೌರವ?" ಎಂದು ಭಕ್ತರು ಆಡಳಿತ ಮಂಡಳಿಯನ್ನು ಪ್ರಶ್ನಿಸಿದ್ದಾರೆ.


ಭಕ್ತರ ಭಾವನೆಗಳ ಜೊತೆ ಆಟವಾಡಿದ ಈ ನಿರ್ಲಕ್ಷ್ಯಕ್ಕೆ ಆಡಳಿತ ಮಂಡಳಿ ಕೂಡಲೇ ಉತ್ತರ ನೀಡಬೇಕು ಮತ್ತು ಮುಂದಿನ ದಿನಗಳಲ್ಲಿ ಇಂತಹ ಅವ್ಯವಸ್ಥೆ ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಒತ್ತಾಯ.

ಈ ಬಗ್ಗೆ ದೇವಸ್ಥಾನ ಆಡಳಿತ ಮಂಡಳಿಯಿಂದ ಇನ್ನೂ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ.



Recently Updated:

ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..
ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!
ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.*  ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ    *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.* ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.* ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.*
ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.
ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..
ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್. ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್.