ಕಠಿಣ ಪರಿಶ್ರಮಕ್ಕೆ ಫಲ ಕಂದಾಯ ರಾಜ್ಯಪ್ಪ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ ರಾಚಪ್ಪಜಿ ಅವರಿಗೆ ಅಭಿನಂದನೆ.

14 Aug 2026
ಕರಾವಳಿ

ಹೆಬ್ರಿ:ಶಿವಪುರ ಗ್ರಾಮ ಆಡಳಿತಾಧಿಕಾರಿಯಾಗಿ ರಾಚಪ್ಪಜಿ ಅವರು ನೀಡಿದ ಸೇವೆಯ ಜನರ ಮನದಲ್ಲಿದೆ, ಸರ್ಕಾರದ ಸೇವೆಯಲ್ಲಿ ಅವರು ಜನರ ಪ್ರೀತಿಯನ್ನು ಗಳಿಸಿದ್ದಾರೆ. ಕಚೇರಿಗೆ ಬಂದವರ ಸಮಸ್ಯೆಯನ್ನು ಆಲಿಸಿ ನೀಡಿದ ಸೇವೆ ಸದಾ ಸ್ಮರಣಿಯ, ಕಂದಾಯ ಇಲಾಖೆಯಲ್ಲಿ ಅವರು ಇನ್ನಷ್ಟು ಜನಸೇವೆ ಮಾಡಿ ಉನ್ನತ ಸ್ಥಾನಕ್ಕೇರಿ ಸಾಧನೆ ಮಾಡಲಿ ಎಂದು ಮುಖಂಡರಾದ ಶಿವಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸುರೇಶ ಶೆಟ್ಟಿ ಹೇಳಿದರು.


ಕಂದಾಯ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ ಶಿವಪುರ ಗ್ರಾಮ ಆಡಳಿತಾಧಿಕಾರಿ ರಾಚಪ್ಪಜಿ ಅವರಿಗೆ ಶುಕ್ರವಾರ ಶಿವಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಿವಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮೂರ್ಸಾಲು ಮೋಹನದಾಸ ನಾಯಕ್‌ ಮಾತನಾಡಿ ಅತ್ಯುತ್ತಮವಾಗಿ ಸೇವೆ ನೀಡಿದ ರಾಚಪ್ಪಜಿಯವರು ಇನ್ನಷ್ಟು ಸೇವೆಯನ್ನು ನೀಡಲಿ ಎಂದು ಆಶಿಸಿದರು.



ಸೇವಾವಧಿಯಲ್ಲಿ ಸಹಕಾರ ನೀಡಿದ ಸರ್ವರಿಗೂ ರಾಚಪ್ಪಜಿ ಅವರು ಕೃತಜ್ಞತೆ ಸಲ್ಲಿಸಿ ಮುಂದೆ ಕರ್ತವ್ಯದ ಮೂಲಕ ಜನಸೇವೆ ಮಾಡುವುದಾಗಿ ತಿಳಿಸಿದರು.

ಶಿವಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಘವೇಂದ್ರ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಸಂಘಟಕರಾದ ಸಮಾಜ ಸೇವಕರಾದ ಬೈಕಾಡಿ ಮಂಜುನಾಥ ರಾವ್‌ ಶಿವಪುರ, ಹೆಬ್ರಿ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ರಮೇಶ ಕುಮಾರ್‌, ವಿದ್ಯುತ್‌ ಗುತ್ತಿಗೆದಾರ ಉದ್ಯಮಿ ಶ್ರೀನಿವಾಸ ಹೆಬ್ಬಾರ್‌, ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ಸುಮಿತ್ರಾ ನಾಯ್ಕ್‌, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಅನಸೂಯ, ಗ್ರಾಮ ಸಹಾಯಕ ಮೂರ್ತಿ, ಮುಖ್ಯ ಶಿಕ್ಷಕಿ ಗುಲಾಬಿ ಅಣ್ಣಪ್ಪ ಕುಲಾಲ್‌, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಶಿಕ್ಷಕರು, ಪ್ರಮುಖರು ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಣ ರಮಾನಂದ ಶೆಟ್ಟಿ ನಿರೂಪಿಸಿ ಮುಖ್ಯ ಶಿಕ್ಷಕಿ ಗುಲಾಬಿ ಅಣ್ಣಪ್ಪ ಕುಲಾಲ್‌ ಸ್ವಾಗತಿಸಿದರು.

Recently Updated:

ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..
ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!
ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.*  ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ    *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.* ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.* ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.*
ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.
ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..
ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್. ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್.