ಕುಂದಾಪುರದಲ್ಲಿ ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ ವೈದ್ಯನ ಅಟ್ಟಹಾಸ.! ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..

22 Aug 2026
ರಾಜ್ಯ

ಕುಂದಾಪುರ (ಆ.22): ಉಡುಪಿ ಜಿಲ್ಲೆ ಕುಂದಾಪುರದ ಸರ್ಕಾರಿ ಆಸ್ಪತ್ರೆಯಲ್ಲಿನ ಭ್ರಷ್ಟಾಚಾರದ ವರದಿ ಮಾಡಿದ್ದ ಕುಂದಾಪುರ ತಾಲೂಕು 'ಕನ್ನಡಪ್ರಭ' ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಮೇಲೆ ಶುಕ್ರವಾರ ಬೆಳಗ್ಗೆ ಆ ಆಸ್ಪತ್ರೆಯ ಸರ್ಜನ್ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಏಕಾಏಕಿ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿದ್ದಾರೆ.


ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಹಲ್ಲೆಗೈದ ಡಾ। ಶೆಟ್ಟಿಯವರನ್ನು ಸೇವೆಯಿಂದ ಅಮಾನತುಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.


2 ವಾರಗಳ ಹಿಂದೆ 'ಕನ್ನಡಪ್ರಭ'ದಲ್ಲಿ 'ಕುಂದಾಪುರ ಸರ್ಕಾರಿ ಆಸ್ಪತ್ರೆಯ ಮೇಲೆ ಭ್ರಷ್ಟಾಚಾರದ ಕರಿನೆರಳು' ಶೀರ್ಷಿಕೆಯಡಿ ಶ್ರೀಕಾಂತ್ ಅವರು, ಆಸ್ಪತ್ರೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಬಯಲಿಗೆಳೆದಿದ್ದರು. ಹೀಗಾಗಿ ಅವರ ಮೇಲೆ ಹಲ್ಲೆ ಮಾಡಲಾಗಿದೆ.


ಕೃತ್ಯವನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ಖಂಡಿಸಿದ್ದಾರೆ ಹಾಗೂ ಡಾ। ಶೆಟ್ಟಿ ಅವರನ್ನು ಸರ್ಕಾರ ಅಮಾನತು ಮಾಡಿದೆ ಹಾಗೂ ಅವರ ವಿರುದ್ಧ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಹಲ್ಲೆಯಿಂದ ಕೈ ಮತ್ತು ಎದೆ ನೋವಿಗೊಳಗಾದ ಶ್ರೀಕಾಂತ್ ಹೆಮ್ಮಾಡಿ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಏಕಾಏಕಿ ಹಲ್ಲೆ:


ಶುಕ್ರವಾರ ಬೆಳಗ್ಗೆ ಪಟ್ಟಣದ ಹೋಟೆಲ್‌ವೊಂದರಲ್ಲಿ ಶ್ರೀಕಾಂತ್‌ ಅವರು ತಮ್ಮ ಪತ್ನಿಯೊಂದಿಗೆ ತಿಂಡಿ ತಿನ್ನುತ್ತಿದ್ದರು. ಈ ವೇಳೆ, ಶ್ರೀಕಾಂತ್ ಬಳಿ ಬಂದ ಡಾ.ಮಹೇಂದ್ರ ಕುಮಾರ್ ಶೆಟ್ಟಿ, 'ನಿನ್ನ ಜೊತೆ ಸ್ವಲ್ಪ ಮಾತನಾಡುವುದಿದೆ' ಎಂದು ಕೈಹಿಡಿದು ಪಕ್ಕಕ್ಕೆ ಕರೆದುಕೊಂಡು ಹೋಗಿ, ಕಾಲರ್‌ಗೆ ಕೈ ಹಾಕಿ, ಕೆನ್ನೆಗೆ ಹೊಡೆದಿದ್ದಾರೆ. ವರದಿ ಬರೆದ ಬಗ್ಗೆ ಅವಾಚ್ಯವಾಗಿ ನಿಂದಿಸಿದ್ದಾರೆ. ತಕ್ಷಣ ಶ್ರೀಕಾಂತ್ ಅವರ ಪತ್ನಿ ಮತ್ತು ಪತ್ರಕರ್ತ ಯೋಗೀಶ್ ಅವರು ವೈದ್ಯರನ್ನು ತಡೆದಿದ್ದಾರೆ.


ಶ್ರೀಕಾಂತ್ ತಮ್ಮ ವರದಿಯ ಬಗ್ಗೆ ಸ್ಪಷ್ಟೀಕರಣ ನೀಡುತ್ತಿದ್ದರೂ ಅದನ್ನು ಕೇಳದೆ ಮತ್ತೆ, ಮತ್ತೆ ಶ್ರೀಕಾಂತ್‌ ಅವರ ಮೇಲೆ ಹಲ್ಲೆಗೆ ಯತ್ನಿಸಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಸಂದರ್ಭ ಈ ಸರ್ಕಾರಿ ವೈದ್ಯರ ಜೊತೆಗಿದ್ದ ಅವರ ಖಾಸಗಿ ಕ್ಲಿನಿಕ್‌ನ ಪಾಲುದಾರ ಮಹಿಳಾ ವೈದ್ಯೆಯೂ ಸಾಥ್ ನೀಡಿದ್ದಾರೆ.


ಹಲ್ಲೆಯಿಂದ ಕೈ ಮತ್ತು ಎದೆ ನೋವಿಗೊಳಗಾದ ಶ್ರೀಕಾಂತ್ ಹೆಮ್ಮಾಡಿ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಇದೀಗ ದೂರಿನ ಮೇರೆಗೆ ಹಲ್ಲೆಯ ದೃಶ್ಯಾವಳಿಗಳನ್ನು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸರು ಶ್ರೀಕಾಂತ್ ಹೇಳಿಕೆ ಪಡೆದು, ಘಟನಾ ಸ್ಥಳದಲ್ಲಿ ಸಾಕ್ಷಿಗಳ ಜೊತೆಗೆ ಹೋಟೆಲ್‌ನ ಸ್ಥಳ ಮಹಜರು ನಡೆಸಿದ್ದಾರೆ. ಪತ್ರಕರ್ತನ ಮೇಲಿನ ಹಲ್ಲೆಯನ್ನು ವಿವಿಧ ಸಂಘಟನೆಗಳು ಖಂಡಿಸಿವೆ.


ಶೆಟ್ಟಿ ಅಮಾನತು:


ಹಲ್ಲೆ ಬೆನ್ನಲ್ಲೇ ಕುಂದಾಪುರ ಸರ್ಕಾರಿ ಆಸ್ಪತ್ರೆಯ ಸರ್ಜನ್ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಅವರನ್ನು ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಶಿಸ್ತು ಪ್ರಾಧಿಕಾರಿ ಮತ್ತು ಆಯುಕ್ತ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.


ಹಲ್ಲೆಯ ದೃಶ್ಯಗಳು ಸುದ್ದಿವಾಹಿನಿಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರು ರಾಜ್ಯ ಆಯುಕ್ತರಿಗೆ ಘಟನೆ ಬಗ್ಗೆ ವರದಿ ನೀಡಿದ್ದಾರೆ. ಈ ವರದಿಯಂತೆ, ಘಟನೆ ಬಗ್ಗೆ ಇಲಾಖಾ ವಿಚಾರಣೆಗೆ ಆದೇಶಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಶೆಟ್ಟಿಯವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

Recently Updated:

ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..
ಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್  ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!!  ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್ ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!! ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯ
ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗ
ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,