ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್: ನವೆಂಬರ್ 1 ರಿಂದ ಬಿಲ್ ನಲ್ಲೇ ಔಷಧದ ಖರೀದಿ ಬೆಲೆ ಕಡ್ಡಾಯ ರೋಗಿಗಳಿಗೆ ಗುಡ್ ನ್ಯೂಸ್...

22 Oct 2026
ರಾಜ್ಯ

ಆಸ್ಪತ್ರೆ ಬಿಲ್ ಎಂದರೆ ರೋಗಿಗಳಿಗೆ ಇಂದಿಗೂ ನಡುಕ ಹುಟ್ಟಿಸುವ ವಿಷಯ. ಚಿಕಿತ್ಸೆ ವೆಚ್ಚದ ಜೊತೆಗೆ ಔಷಧಿ, ಇಂಜೆಕ್ಷನ್, ಸ್ಟೆಂಟ್ ಮತ್ತು ಇತರ ವೈದ್ಯಕೀಯ ಸಾಮಗ್ರಿಗಳ ಹೆಸರಿನಲ್ಲಿ ಎಷ್ಟು ಹಣ ಸುಲಿಗೆ ಮಾಡಲಾಗುತ್ತಿದೆ ಎಂಬುದು ರೋಗಿಗಳಿಗೇ ಗೊತ್ತಾಗುವುದಿಲ್ಲ. 10 ರೂಪಾಯಿಗೆ ಸಿಗುವ ಔಷಧಿಗೆ 100 ರೂಪಾಯಿ ಬಿಲ್ ಮಾಡುವ ಅಕ್ರಮಕ್ಕೆ ಇನ್ಮುಂದೆ ಬ್ರೇಕ್ ಬೀಳಲಿದೆ.


ಈ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ ಮಹತ್ವದ ಮತ್ತು ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ನವೆಂಬರ್ 1 ರಿಂದ ಕರ್ನಾಟಕದ ಎಲ್ಲಾ ಖಾಸಗಿ, ಸರ್ಕಾರಿ ಮತ್ತು ಟ್ರಸ್ಟ್ ಆಸ್ಪತ್ರೆಗಳಲ್ಲಿ ಬಿಲ್ಲಿಂಗ್ ಪಾರದರ್ಶಕತೆ ನಿಯಮ ಜಾರಿಗೆ ಬರಲಿದೆ.




ರೋಗಿಗಳಿಗೆ ಆಸ್ಪತ್ರೆ ಬಿಲ್ ಕಂಡರೆ ಒಂದು ರೀತಿ ನಡುಕ. ಹೀಗಿರುವಾಗ ಚಿಕಿತ್ಸೆ ವೆಚ್ಚದ ಜೊತೆಗೆ ಔಷಧ, ವೈದ್ಯಕೀಯ ಉಪಕರಣಗಳ ಹೆಸರಿನಲ್ಲಿ ಎಷ್ಟು ಹಣ ವಸೂಲಿ ಮಾಡಲಾಗುತ್ತಿದೆ ಎನ್ನುವುದು ಅನೇಕರಿಗೆ ಗೊತ್ತಾಗುವುದಿಲ್ಲ. ಔಷಧಗಳನ್ನ ಆಸ್ಪತ್ರೆಗಳು ಎಷ್ಟು ಬೆಲೆಗೆ ಖರೀದಿಸುತ್ತವೆ, ಅದನ್ನ ರೋಗಿಗಳಿಗೆ ಎಷ್ಟು ಬೆಲೆಗೆ ಮಾರಾಟ ಮಾಡಲಾಗುತ್ತದೆ ಎಂಬ ಮಾಹಿತಿ ಇನ್ಮುಂದೆ ಬಿಲ್ನಲ್ಲೇ ಮಾಹಿತಿ ಸಿಗಲಿದೆ.


ಆರೋಗ್ಯ ಇಲಾಖೆ ಈ ಮಹತ್ವದ ಕ್ರಮಕ್ಕೆ ಮುಂದಾಗಿದೆ. ನವೆಂಬರ್ 1ರಿಂದ ಕರ್ನಾಟಕದ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಈ ನಿಯಮ ಜಾರಿಗೆ ಬರಲಿದೆ. ಆ ಮೂಲಕ ಆಸ್ಪತ್ರೆಗಳ ಕಳ್ಳಾಟಕ್ಕೂ ಬ್ರೇಕ್ ಬೀಳಲಿದೆ.


ಆಸ್ಪತ್ರೆ ಬಿಲ್‌ನಲ್ಲೇ ಔಷಧದ ಖರೀದಿ ಬೆಲೆ: ನವೆಂಬರ್ 1ರಿಂದಲೇ ಜಾರಿ


ಔಷಧದ ಖರೀದಿ ಬೆಲೆಯಲ್ಲಿ ಗೊಂದಲಕ್ಕೆ ತೆರೆ ಎಳೆಯಲು ಆರೋಗ್ಯ ಇಲಾಖೆ ಮಹತ್ವದ ಕ್ರಮಕ್ಕೆ ಮುಂದಾಗಿದೆ. ನವೆಂಬರ್ 1ರಿಂದ ಆಸ್ಪತ್ರೆಗಳಲ್ಲಿ ಲಭ್ಯವಿರುವ ಚಿಕಿತ್ಸೆಗಳ ಅಧಿಕೃತ ದರಪಟ್ಟಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸಲು ಸೂಚನೆ ನೀಡಲಾಗಿದೆ. ಯಾವೆಲ್ಲಾ ಚಿಕಿತ್ಸೆ ಲಭ್ಯವಿದೆ, ಪ್ರತಿಯೊಂದು ಚಿಕಿತ್ಸೆಗೆ ನಿಗದಿಪಡಿಸಿರುವ ದರ ಎಷ್ಟು ಎನ್ನುವ ಮಾಹಿತಿ ರೋಗಿಗಳಿಗೆ ಸುಲಭವಾಗಿ ಲಭ್ಯವಾಗಬೇಕು. ಆಸ್ಪತ್ರೆಗಳ ನೋಂದಣಿ ಕೌಂಟರ್ ಮುಂದೆ ಸಾರ್ವಜನಿಕರಿಗೆ ಸ್ಪಷ್ಟವಾಗಿ ಕಾಣುವಂತೆ ದರಪಟ್ಟಿ ಅಳವಡಿಸುವಂತೆ ಸೂಚನೆ ನೀಡಿದೆ.


ಚಿಕಿತ್ಸಾ ದರಪಟ್ಟಿ ಪ್ರದರ್ಶನ ಕಡ್ಡಾಯ: ಸಾರ್ವಜನಿಕ ಸ್ಥಳದಲ್ಲಿ ಅಳವಡಿಕೆ


ಇನ್ನು ಔಷಧಗಳ ಬಿಲ್ಲಿಂಗ್ ವಿಚಾರದಲ್ಲೂ ಆರೋಗ್ಯ ಇಲಾಖೆ ಮಹತ್ವದ ಸೂಚನೆ ನೀಡಿದೆ. ಆಸ್ಪತ್ರೆಗಳು ಔಷಧಗಳನ್ನು ಎಷ್ಟು ರೂ.ಗೆ ಖರೀದಿ ಮಾಡುತ್ತವೆ, ರೋಗಿಗಳಿಗೆ ಎಷ್ಟು ಬೆಲೆಗೆ ಬಿಲ್ ಮಾಡುತ್ತವೆ ಎನ್ನುವ ಮಾಹಿತಿ ಇನ್ಮುಂದೆ ಬಿಲ್‌ನಲ್ಲಿ ನಮೂದಿಸಬೇಕು. ಔಷಧಗಳ ಖರೀದಿ ಬೆಲೆ ಹಾಗೂ ಗರಿಷ್ಠ ಚಿಲ್ಲರೆ ಬೆಲೆ ಅಂದರೆ ಎಂಆರ್‌ಪಿ ಎರಡನ್ನೂ ಬಿಲ್‌ನಲ್ಲಿ ನಮೂದಿಸುವಂತೆ ಸೂಚಿಸಲಾಗಿದೆ. ರೋಗಿಗಳಿಗೆ ನೀಡುವ ಬಿಲ್‌ನಲ್ಲಿ ಪ್ರತಿಯೊಂದು ಔಷಧದ ವಿವರ ಪ್ರತ್ಯೇಕವಾಗಿ ಇರಬೇಕು. ಔಷಧದ ಹೆಸರು, ಬ್ರ್ಯಾಂಡ್, ಬ್ಯಾಚ್ ನಂಬರ್, ತಯಾರಿಕಾ ಮತ್ತು ಎಕ್ಸ್‌ಪೈರಿ ದಿನಾಂಕದಂತಹ ವಿವರಗಳನ್ನೂ ದಾಖಲಿಸಬೇಕು.


ವೈದ್ಯಕೀಯ ಸಾಮಗ್ರಿಗಳ ಬಿಲ್ಲಿಂಗ್‌ನಲ್ಲೂ ಪಾರದರ್ಶಕತೆ ತರಲು ಕ್ರಮ


ಕೇವಲ ಔಷಧಗಳಷ್ಟೇ ಅಲ್ಲ, ವೈದ್ಯಕೀಯ ಉಪಕರಣಗಳು, ಸ್ಟೆಂಟ್‌ಗಳು ಹಾಗೂ ಬಳಸಿ ಬಿಸಾಡುವ ವೈದ್ಯಕೀಯ ಸಾಮಗ್ರಿಗಳ ಬಿಲ್ಲಿಂಗ್‌ನಲ್ಲೂ ಪಾರದರ್ಶಕತೆ ಕಾಪಾಡುವಂತೆ ಸೂಚಿಸಲಾಗಿದೆ. ಔಷಧದ ನೈಜ ಖರೀದಿ ಬೆಲೆ ಎಷ್ಟು, ರೋಗಿಗೆ ವಿಧಿಸುತ್ತಿರುವ ಬೆಲೆ ಎಷ್ಟು ಅನ್ನೋದರ ಬಗ್ಗೆ ಸ್ಪಷ್ಟ ಮಾಹಿತಿ ನೀಡಬೇಕು. ಆ ಮೂಲಕ ಬಿಲ್‌ನಲ್ಲಿ ನಮೂದಿಸಿರುವ ದರವನ್ನು ಪರಿಶೀಲಿಸಲು ರೋಗಿಗಳಿಗೆ ಅನುಕೂಲವಾಗಲಿದೆ.


ನಿಯಮ ಉಲ್ಲಂಘಿಸಿದರೆ ಕ್ರಮ


ಇನ್ನು ಆಸ್ಪತ್ರೆಗಳಲ್ಲಿ ಔಷಧಗಳ ಖರೀದಿ ಮತ್ತು ಬಿಲ್ಲಿಂಗ್‌ಗೆ ಸಂಬಂಧಿಸಿದ ದಾಖಲೆಗಳ ಸಂರಕ್ಷಣೆಗೂ ಸೂಚನೆ ನೀಡಲಾಗಿದೆ. ಔಷಧಗಳ ಖರೀದಿ ಇನ್‌ವಾಯ್ಸ್ ಖರೀದಿ ದರ ಹಾಗೂ ಬಿಲ್ಲಿಂಗ್ ದಾಖಲೆಗಳನ್ನು ಕನಿಷ್ಟ ಮೂರು ವರ್ಷಗಳ ಕಾಲ ಸಂರಕ್ಷಿಸಬೇಕಾಗುತ್ತದೆ. ಅಗತ್ಯವಿದ್ದಾಗ ಔಷಧ ನಿಯಂತ್ರಣ ಪ್ರಾಧಿಕಾರ ಅಧಿಕಾರಿಗಳು ಈ ದಾಖಲೆಗಳನ್ನು ಪರಿಶೀಲಿಸಲು ಅವಕಾಶವಿರಲಿದೆ. ನಿಯಮಗಳ ಉಲ್ಲಂಘನೆ ಕಂಡುಬಂದರೆ ಸಂಬಂಧಿತ ಕಾನೂನುಗಳ ಅಡಿಯಲ್ಲಿ ಕ್ರಮ ಕೈಗೊಳ್ಳುವ ಬಗ್ಗೆಯೂ ಸೂಚನೆ ನೀಡಲಾಗಿದೆ. ಜಿಲ್ಲಾ ಆರೋಗ್ಯಾಧಿಕಾರಿಗಳು, ಮುಖ್ಯ ವೈದ್ಯಾಧಿಕಾರಿಗಳು ಹಾಗೂ ಔಷಧ ನಿಯಂತ್ರಣ ಪ್ರಾಧಿಕಾರದ ಅಧಿಕಾರಿಗಳ ಮೇಲ್ವಿಚಾರಣೆಯೂ ಮಹತ್ವ ಪಡೆದುಕೊಂಡಿದೆ. ಈ ಸೂಚನೆಗಳು ಕರ್ನಾಟಕದ ಸರ್ಕಾರಿ, ಖಾಸಗಿ ಮತ್ತು ಟ್ರಸ್ಟ್ ಆಸ್ಪತ್ರೆಗಳಿಗೆ ಅನ್ವಯವಾಗಲಿದೆ.


ಒಟ್ಟಿನಲ್ಲಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರಪಟ್ಟಿ ಪ್ರದರ್ಶನದಿಂದ ಹಿಡಿದು ಔಷಧಗಳ ಖರೀದಿ ಬೆಲೆ ಮತ್ತು ಎಂಆರ್‌ಪಿ ನಮೂದಿಸುವವರೆಗೆ ಬಿಲ್ಲಿಂಗ್ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಆರೋಗ್ಯ ಇಲಾಖೆ ಮುಂದಾಗಿದೆ. ರೋಗಿಗಳಿಗೆ ಚಿಕಿತ್ಸೆ ವೆಚ್ಚ ಬಗ್ಗೆ ಮೊದಲೇ ಮಾಹಿತಿ ಸಿಗಬೇಕು. ಆದರೆ ಇದಕ್ಕೆ ಖಾಸಗಿ ಆಸ್ಪತ್ರೆಗಳಿಂದ ಆರಂಭದಲ್ಲಿಯೇ ವಿರೋಧ ಶುರುವಾಗಿದ್ದು, ನಿಯಮ ಉಲ್ಲಂಘಿಸುವ ಆಸ್ಪತ್ರೆಗಳ ವಿರುದ್ಧ ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಅಂತ ಕಾದು ನೋಡಬೇಕಿದೆ.

Recently Updated:

ನಕಲಿ ಪತ್ರಿಕೋದ್ಯಮಕ್ಕೆ ಕಾನೂನಿನ ಬಿಸಿ   ಕೊರಟಗೆರೆ ಪ್ರಕರಣ ಒಂದು ಎಚ್ಚರಿಕೆ..ನಕಲಿ ಪತ್ರಿಕೋದ್ಯಮಕ್ಕೆ ಕಾನೂನಿನ ಬಿಸಿ ಕೊರಟಗೆರೆ ಪ್ರಕರಣ ಒಂದು ಎಚ್ಚರಿಕೆ..
ಕುಂದಾಪುರದಲ್ಲಿ  ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ  ವೈದ್ಯನ ಅಟ್ಟಹಾಸ.!   ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..ಕುಂದಾಪುರದಲ್ಲಿ ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ ವೈದ್ಯನ ಅಟ್ಟಹಾಸ.! ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..
ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..
ಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್  ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!!  ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್ ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!! ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯ
ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗ
ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ