ಭೀಮಾತೀರದ ರಕ್ತ ಚರಿತ್ರೆ ಹಂತಕ ಭಾಗಪ್ಪ ಹರಿಜನ್‌ನನ್ನು ದುಷ್ಕರ್ಮಿಗಳ ಗುಂಪೊಂದು ಬರ್ಬರವಾಗಿ ಕೊಚ್ಚಿ ಬಾಗಪ್ಪ ಹರಿಜನ್ ಭೀಕರ ಹತ್ಯ..!!

12 Feb 2025
ರಾಜ್ಯ

ವಿಜಯಪುರ:(ಫೆ.12): ಭೀಮಾತೀರದ ಹಂತಕ ನಟೋರಿ ಬಾಗಪ್ಪ ಹರಿಜನ್‌ನನ್ನು ದುಷ್ಕರ್ಮಿಗಳ ಗುಂಪೊಂದು ಬರ್ಬರವಾಗಿ ಕೊಚ್ಚಿ ಹಾಕಿದ ಘಟನೆ ವಿಜಯಪುರ ನಗರದ ರೇಡಿಯೋ ಕೇಂದ್ರದ ಬಳಿ ನಡೆದಿದೆ. ಮಾರಾಕಾಸ್ತ್ರಗಳನ್ನು ಹಿಡಿದು ಬಂದಿದ್ದ 20ಕ್ಕೂ ಹೆಚ್ಚು ದುಷ್ಕರ್ಮಿಗಳು ಮುಖ, ತಲೆ ಮಾರ್ಮಾಂಗ ಸೇರಿದಂತೆ ಮನಬಂದಂತೆ ಕೊಚ್ಚಿ ಪರಾರಿಯಾಗಿದ್ದಾರೆ.



ಭೀಮಾತೀರದ ನಟೋರಿಯಸ್ ಹಂತಕ ಚಂದಪ್ಪನ ಶಿಷ್ಯನಾಗಿದ್ದ ಬಾಗಪ್ಪ ಹರಿಜನ್, ವಿಜಯಪುರ ಭೀಮಾತೀರ, ಕಲಬುರಗಿ ಸೇರಿದಂತೆ ಸುತ್ತಲು ಹಾವಳಿ ಇಟ್ಟಿದ್ದ ಬಾಗಪ್ಪ. ಕಳೆದ ಆಗಸ್ಟ್ 8, 2018ರಲ್ಲೇ ಕೋರ್ಟ್ ಆವರಣದಲ್ಲಿ ಪೀರಪ್ಪ ಹಡಪದ್ ಎಂಬುವವನಿಂದ ಬಾಗಪ್ಪ ಹರಿಜನ್ ಮೇಲೆ ಫೈರಿಂಗ್ ನಡೆದಿತ್ತು. ಆಗ ಸ್ವಲ್ಪದರಲ್ಲೇ ಬಚಾವ್ ಆಗಿದ್ದ. ಚಂದಪ್ಪ ಹರಿಜನ್‌ ಅಣ್ಣ ಯಲ್ಲಪ್ಪನ ಮಕ್ಕಳು ಸುಪಾರಿ ನೀಡಿದ್ದರು. ಹೀಗಾಗಿ ಈ ಹತ್ಯೆ ಪ್ರಕರಣದ ಹಿಂದೆ ಯಲ್ಲಪ್ಪ ಹರಿಜನ್ ಕೈವಾಡವಿದೆ ಎಂಬ ಮಾತುಗಳು ಕೂಡಾ ಕೇಳಿ ಬಂದಿವೆ. ಯಲ್ಲಪ್ಪ ಹರಿಜನ್ ಭೀಮಾ ತೀರದ ಅತ್ಯಂತ ನೊಟೋರಿಯಸ್ ಹಂತಕ ಚಂದಪ್ಪ ಹರಿಜನ್ ಅಣ್ಣನಾಗಿದ್ದಾನೆ.


ಸದ್ಯ ಘಟನೆ ಸ್ಥಳಕ್ಕೆ ಡಾಗ್ ಸ್ಕ್ವಾಡ್, ವಿಧಿ ವಿಜ್ಞಾ‌ನ ವಿಭಾಗದ ತಜ್ಞರ ಭೇಟಿ ನೀಡಿದ್ದಾರೆ. ಎಸ್‌ಪಿ ಲಕ್ಷ್ಮಣ ನಿಂಬರಗಿ, ಎಎಸ್ಪಿ ಶಂಕರ್ ಮಾರಿಹಾಳ, ಎಎಸ್ಪಿ ರಾಮನಗೌಡ ಹಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುಷ್ಕರ್ಮಿಗಳು ಹಂತಕ ಬಾಗಪ್ಪನ ಎಡಗೈ ಹಾಗೂ ಮರ್ಮಾಂಗ ಕತ್ತರಿಸುವ ದುಷ್ಕರ್ಮಿಗಳು.



ಹತ್ಯೆ ಪ್ರಕರಣ ಕುರಿತು ಎಸ್ಪಿ ಮಾಹಿತಿ


ಭಾಗಪ್ಪ ಹರಿಜನ್ ಹತ್ಯೆ ಕುರಿತು ಎಸ್ಪಿ ಲಕ್ಷ್ಮಣ ನಿಂಬರಗಿ ಮಾತನಾಡಿದ್ದು, ಬಾಗಪ್ಪ ಮದೀನಾ ನಗರದ ಬಾಡಿಗೆ ಮನೆಯಲ್ಲಿದ್ದ. ಇದೆ ಜಾಗದಲ್ಲಿ ನಾಲ್ಕೈದು ಜನರಿಂದ ಹತ್ಯೆ ಮಾಡಲಾಗಿದೆ. ಆಟೋದಲ್ಲಿ ಬಂದ ನಾಲ್ಕೈದು ಜನರು ಕೊಡಲಿ ಸೇರಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಊಟ ಮಾಡಿಕೊಂಡು ಮನೆ ಎದುರು ಅಡ್ಡಾಡುತ್ತಿದ್ದ ಕೃತ್ಯ ಎಸಗಲಾಗಿದೆ. ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಲ್ಲದೆ ಬಂದೂನಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ ಎಂದು ತಿಳಿಸಿದರು.


ಕರೆಂಟ್ ಕಟ್ ಮಾಡಿ ಹತ್ಯೆ?


ಬಾಗಪ್ಪನ ಹತ್ಯೆಗೆ ಎಷ್ಟು ಜನರು ಬಂದಿದ್ದರು ಎಂದು ನಿಖರ ಮಾಹಿತಿ ಇಲ್ಲ ಎಂದು ಎಸ್ಪಿ ತಿಳಿಸಿದ್ದಾರೆ. ಮನೆಯವರು ನೀಡಿದ ಮಾಹಿತಿ ಆಧರಿಸಿ ಹೇಳುತ್ತಿದ್ದೇನೆ. ಇನ್ನು ಕರೆಂಟ್ ಕಟ್ ಮಾಡಿ ಹತ್ಯೆ ಮಾಡಿದ್ದ ಬಗ್ಗೆ ಮಾಹಿತಿ ಇಲ್ಲ. ಬಾಗಪ್ಪನ ಸಂಬಂಧಿಕರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದರು. ಬಾಗಪ್ಪ ಮೇಲೆ 10 ಕೇಸ್‌ಗಳಿವೆ, ಈ ಪೈಕಿ 6 ಮರ್ಡರ್ ಕೇಸ್ ಇವೆ. 1993 ರಿಂದ ಬಾಗಪ್ಪನ ಕ್ರಿಮಿನಲ್ ಹಿಸ್ಟರಿ ಶುರುವಾಗಿದೆ. 2016-17ರಲ್ಲಿ ಬಾಗಪ್ಪನ ಮೇಲೆ ಸೆಕ್ಯೂರಿಟಿ ಕೇಸ್ ಹಾಕಲಾಗಿತ್ತು. ಎಲ್ಲ ಆಯಾಮಗಳಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಜಿಲ್ಲಾ ಪೊಲೀಸ್ ತಂಡವಾಗಿ ಕೆಲಸ ಮಾಡುತ್ತಿದೆ ಎಂದು ಎಸ್ಪಿ ಮಾಹಿತಿ ನೀಡಿದರು.



ಹಲವು ಕೃತ್ಯ ಬಾಗಪ್ಪ ಭಾಗಿ


ಕಲಬುರ್ಗಿ, ವಿಜಯಪುರ ಭಾಗದ ಭೀಮಾತೀರದಲ್ಲಿ ಹಲವು ಕೃತ್ಯಗಳಲ್ಲಿ ಬಾಗಪ್ಪ ಭಾಗಿಯಾಗಿದ್ದ. 1998‌ ರಲ್ಲಿ‌ ಸಿಂದಗಿಯಲ್ಲಿ ಸ್ಟನ್ ಗನ್ ಬಳಸಿ ಗುಂಡು ಹಾರಿಸಿದ್ದ ಪ್ರಕರಣ ಸೇರಿದಂತೆ ಹಲವು ಕೇಸ್ಗಳಲ್ಲಿ ಈತನ‌ ಹೆಸರಿದೆ. ಕಳೆದ‌ 2018 ಆಗಸ್ಟ್ 8ರಲ್ಲಿ ಇದೆ ಬಾಗಪ್ಪ ಹರಿಜನ್ ಮೇಲೆ ಪೈರಿಂಗ್ ನಡೆದಿತ್ತು. ಪೀರಪ್ಪ ಹಡಪದ್ ಗುಂಡಿನ ದಾಳಿ ಮಾಡಿದ್ದ. ಪ್ರಕರಣದ‌ ವಿಚಾರಣೆಗೆ ಬಂದಾಗ ವಿಜಯಪುರದ ಕೋರ್ಟ್ ಆವರಣದಲ್ಲೇ ಮಧ್ಯಾಹ್ನದ ವೇಳೆ ಗುಂಡಿನ ದಾಳಿ ನಡೆದಿತ್ತು. ಬಳಿಕ ಹೈದ್ರಾಬಾದ್ನಲ್ಲಿ ಚಿಕಿತ್ಸೆ ಪಡೆದು‌ ಗುಣಮುಖನಾಗಿದ್ದ.




ಭೀಮಾತೀರದ ಅತ್ಯಂತ ನೊಟೋರಿಯಸ್, ಉತ್ತರ ಕರ್ನಾಟಕದ ವೀರಪ್ಪನ್ ಎಂದೇ ಕರೆಯಲಾಗುವ ಹಂತಕ ಚಂದಪ್ಪ ಹರಿಜನ್ ಅಳಿಯ ಹಾಗೂ ಪಟ್ಟದ ಶಿಷ್ಯ ಈ ಬಾಗಪ್ಪ ಹರಿಜನ್. ಚಂದಪ್ಪ ಹರಿಜನ್ ಹೆಚ್ಚು ಕಡಿಮೆ 55 ಕೊಲೆ ಕೇಸ್'ಗಳ ಆರೋಪಿ. ಬಾಗಪ್ಪ ಚಿಕ್ಕ ವಯಸ್ಸಿನಲ್ಲೇ ಚಂದಪ್ಪನ ಗ್ಯಾಂಗ್ ಸೇರಿದ್ದ ಆತನೊಂದಿಗೇ ಓಡಾಡಿಕೊಂಡಿದ್ದ.


ಆದರೆ ಚಂದಪ್ಪ ಹರಿಜನ್ ಎನ್'ಕೌಂಟರ್ ಬಳಿಕ, ಚಂದಪ್ಪನ 13 ಗನ್'ಗಳನ್ನು ಹಂಚಿಕೊಳ್ಳುವ ವಿಚಾರದಲ್ಲಿ ಅಣ್ಣ ಯಲ್ಲಪ್ಪ ಹಾಗೂ ಅಳಿಯ ಬಾಗಪ್ಪರ ನಡುವೆ ದ್ವೇಷ ಬೆಳೆಯಿತು. ಅಲ್ಲದೇ ಕಲಬುರ್ಗಿಯ ಜಮೀನು ವಿಚಾರದಲ್ಲೂ ಇಬ್ಬರ ನಡುವೆ ವೈಮನಸ್ಸು ಬೆಳೆಯಿತು. ಇಲ್ಲಿಂದಲೇ ತಾನೇ ಚಂದಪ್ಪನ ಉತ್ತರಾಧಿಕಾರಿ ಎಂದು ಬಾಗಪ್ಪ ಹೇಳಿಕೊಳ್ಳಲಾರಂಭಿಸುತ್ತಾನೆ. ಇದರಿಂದಾಗಿ ಇಬ್ಬರೂ ಒಬ್ಬರನ್ನೊಬ್ಬರು ಹತ್ಯೆ ಮಾಡಲು ಯಲ್ಲಪ್ಪ ಯತ್ನಿಸುತ್ತಿದ್ದಾನೆ.


ಬಾಗಪ್ಪನ ಇಬ್ಬರು ಅಳಿಯಂದಿರನ್ನು ಯಲ್ಲಪ್ಪ ಕೊಲೆ ಮಾಡುತ್ತಾನೆ ಈ ಆರೋಪದಡಿಯಲ್ಲಿ ಯಲ್ಲಪ್ಪ ಜೈಲು ಪಾಲಾಗುತ್ತಾನೆ. 2013ರಲ್ಲಿ ಚಂದಪ್ಪನ ತಮ್ಮನನ್ನು ಬಸವರಾಜ್'ನನ್ನು ಕೊಲೆಯಾಗುತ್ತೆ. ಈ ರೀತಿಯಾಗಿ ಇಬ್ಬರ ನಡುವೆಯೂ ದ್ವೇಷ ಬೆಳೆಯುತ್ತದೆ. ಹಿಂದೆ ಕೋರ್ಟ್ ಆವರಣದಲ್ಲಿ ಬಾಗಪ್ಪನ ಮೇಲೆ ಐದು ಸುತ್ತಿನ ಗುಂಡಿನ ದಾಳಿ ನಡೆಸಲಾಗುತ್ತೆ. ಆದ್ರೆ ಅಂದು ಸ್ವಲ್ಪದರಲ್ಲೇ ಬಚಾವ್ ಆಗ್ತಾನೆ ಬಾಗಪ್ಪ. ಗುಂಡಿನ ದಾಳಿಯಿಂದ ಗಾಯಗೊಂಡ ಜಬಾಗಪ್ಪನನ್ನು ಹತ್ತಿರದ ಆಸ್ಪತ್ರೆಗೆ ದಾಖಲಾಗಿದೆ. ಪ್ರಾಣಾಪಾಯದಿಂದ ಪಾರಾಗ್ತಾನೆ. ಆದರೆ ಇದೀಗ ಎರಡನೇ ಯತ್ನದಲ್ಲಿ ಬಾಗಪ್ಪನನ್ನು ಮುಗಿಸಿರುವ ಗ್ಯಾಂಗ್.



ಶತ್ರು ನಾಶಕ್ಕಾಗಿ ದೇವರ ಪೂಜೆ ಪೂಜೆ


ಭಾಗಪ್ಪ ಹರಿಜನ ಆಲಮೇಲ ಸಮೀಪದ ಬ್ಯಾಡಗಿಹಾಳ ಗ್ರಾಮದವನು. ಇತ್ತೀಚೆಗೆ ಬ್ಯಾಡಗಿಹಾಳದಲ್ಲಿ ಲಕ್ಷ್ಮಿ ದೇವಿಯ ಗುಡಿ ಕಟ್ಟಿಸಲು 3 ಎಕರೆ ಭೂಮಿ‌ ನೀಡಿದ್ದ. ದೇವರ ಪೂಜೆ, ದೈವೀಕ ಕಾರ್ಯಗಳಲ್ಲಿ ಹೆಚ್ಚು ಮಗ್ನನಾಗಿದ್ದ ಬಾಗಪ್ಪ ಕಳೆದ 6-7 ವರ್ಷಗಳಿಂದ ಕಂಡಕಂಡ ದೇವರಿಗೆ ಕೈ ಮುಗಿದು ಪೂಜಿಸುತ್ತಿದ್ದ. ಕೋರ್ಟ್ ಆವರಣದಲ್ಲಿ ಗುಂಡಿನ ದಾಳಿ ನಂತರ ಬಾಗಪ್ಪನಿಗೆ ಭಕ್ತಿ ಹೆಚ್ಚಾಗಿತ್ತು. ಗುಡಿ ಗುಂಡಾರಗಳನ್ನು ಸುತ್ತುತ್ತಿದ್ದಲ್ಲದೆ ಅನೇಕ ಪೂಜೆಗಳನ್ನೂ ಮಾಡಿಸುತ್ತಿದ್ದ. ಹಲವಾರು ಮಂದಿಯ ಶತ್ರುತ್ವ ಕಟ್ಟಿಕೊಂಡಿದ್ದ ಕಾರಣಕ್ಕೆ ಸಾವಿನ ಭಯ ಕಾಡ್ತಿತ್ತು. ಹೀಗಾಗಿ ಸಾವಿನ ಭಯ ದೂರಾಗಿಸಲು, ಮನಸ್ಸಿನ ಶಾಂತಿಗಾಗಿ ಪೂಜೆ ಮಾಡಿಸುತ್ತಿದ್ದ. ಶತ್ರುನಾಶಕ್ಕಾಗಿಯೂ ಪೂಜೆ ಮಾಡಿದ್ದ ಬಾಗಪ್ಪನೇ ಈಗ ಹತ್ಯೆಯಾಗಿದ್ದಾನೆ.

Recently Updated:

ಕುಂದಾಪುರದಲ್ಲಿ  ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ  ವೈದ್ಯನ ಅಟ್ಟಹಾಸ.!   ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..ಕುಂದಾಪುರದಲ್ಲಿ ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ ವೈದ್ಯನ ಅಟ್ಟಹಾಸ.! ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..
ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..
ಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್  ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!!  ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್ ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!! ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯ
ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗ
ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ