ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ದುಷ್ಕರ್ಮಿಗಳು ಫೈರಿಂಗ್..!

19 Apr 2025
ರಾಜ್ಯ

ಬೆಂಗಳೂರು: ಬಿಡದಿ:ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಮಿಡ್ ನೈಟ್ ನಲ್ಲಿ ದುಷ್ಕರ್ಮಿಗಳು ಫೈರಿಂಗ್ ನಡೆಸಿರುವ ಘಟನೆ ಬಿಡದಿಯ ಮುತ್ತಪ್ಪ ರೈ ನಿವಾಸದ ಮುಂದೆಯೇ ಜರುಗಿದೆ.


ಘಟನೆಯ

ರಿಕ್ಕಿ ರೈ ತಮ್ಮ ಫಾರ್ಚೂನರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್‌ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ಮನೆಯ ಕಾಂಪೌಂಡ್ ಬಳಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ರಿಕ್ಕಿ ರೈ ಅವರಿಗೆ ಗಾಯಗಳಾಗಿವೆ. ತಕ್ಷಣವೇ ಅವರನ್ನು ಬಿಡದಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಪೊಲೀಸ್ ತನಿಖೆ:

ಘಟನೆಯ ಸ್ಥಳಕ್ಕೆ ರಾಮನಗರ ಎಸ್‌ಪಿ ಶ್ರೀನಿವಾಸ್ ಗೌಡ ಮತ್ತು ಡಿವೈಎಸ್‌ಪಿ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ದಾಳಿಯ ಹಿಂದಿನ ಕಾರಣ, ದುಷ್ಕರ್ಮಿಗಳ ಗುರುತು ಮತ್ತು ಈ ಘಟನೆಯ ಹಿನ್ನೆಲೆಯನ್ನು ಪತ್ತೆಹಚ್ಚಲು ತೀವ್ರ ಪ್ರಯತ್ನ ನಡೆಯುತ್ತಿದೆ.


ಡ್ರೈವಿಂಗ್ ಸೀಟ್ ಟಾರ್ಗೆಟ್ ಮಾಡಿ ಫೈರಿಂಗ್:


ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮೇಲೆ ನಡೆದ ಶೂಟೌಟ್‌ನಲ್ಲಿ ದುಷ್ಕರ್ಮಿಗಳು ಡ್ರೈವಿಂಗ್ ಸೀಟ್‌ನನ್ನೇ ಗುರಿಯಾಗಿಸಿ ಮೂರು ಸುತ್ತು ಗುಂಡುಗಳನ್ನು ಹಾರಿಸಿದ್ದಾರೆ. ರಿಕ್ಕಿ ರೈ ಸಾಮಾನ್ಯವಾಗಿ ತಾನೇ ಕಾರು ಚಾಲನೆ ಮಾಡುತ್ತಿದ್ದ ಕಾರಣ, ದಾಳಿಕೋರರು ಡ್ರೈವಿಂಗ್ ಸೀಟ್‌ನ ಮೇಲೆ ಗುರಿ ಇಟ್ಟಿದ್ದರು. ಆದರೆ, ಈ ಬಾರಿ ಕಾರನ್ನು ಚಾಲಕ ರಾಜು ಚಲಾಯಿಸುತ್ತಿದ್ದು, ಗುಂಡಿನ ದಾಳಿಯ ವೇಳೆ ತಕ್ಷಣ ಮುಂದೆ ಬಗ್ಗಿದ್ದರಿಂದ ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆದರೆ, ಪಕ್ಕದ ಸೀಟ್‌ನಲ್ಲಿದ್ದ ರಿಕ್ಕಿ ರೈ ಅವರ ಮೂಗು ಮತ್ತು ಕೈಗೆ ಗುಂಡು ತಾಕಿದ್ದು, ಗಂಭೀರ ಗಾಯಗೊಂಡಿದ್ದಾರೆ.


ಘಟನೆಯು ಮನೆಯ ಮುಂಭಾಗದ ಮುಖ್ಯ ರಸ್ತೆಗೆ ಕಾರು ಪ್ರವೇಶಿಸುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ನಡೆದಿದೆ. ಎರಡು ದಿನಗಳ ಹಿಂದಷ್ಟೇ ರಷ್ಯಾದಿಂದ ವಾಪಸಾಗಿದ್ದ ರಿಕ್ಕಿ ರೈ, ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಸಕ್ರಿಯವಾಗಿದ್ದರು. ಚಾಲಕ ರಾಜು ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಬಿಡದಿ ಇನ್ಸ್ಪೆಕ್ಟರ್ ಶಂಕರ್ ನಾಯಕ್ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ. ಸದ್ಯ, ಘಟನಾ ಸ್ಥಳದಲ್ಲಿ ಸೀನ್ ಆಫ್ ಕ್ರೈಂ ಆಫೀಸರ್ಸ್ (SOCO) ಮತ್ತು FSL ತಂಡವು ಪರಿಶೀಲನೆ ನಡೆಸುತ್ತಿದೆ. ರಿಕ್ಕಿ ರೈ ಅವರ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ

Recently Updated:

ಕುಂದಾಪುರದಲ್ಲಿ  ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ  ವೈದ್ಯನ ಅಟ್ಟಹಾಸ.!   ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..ಕುಂದಾಪುರದಲ್ಲಿ ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ ವೈದ್ಯನ ಅಟ್ಟಹಾಸ.! ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..
ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..
ಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್  ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!!  ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್ ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!! ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯ
ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗ
ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ