ಮಂಗಳೂರು: 50 ಸಾವಿರ ರೂ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ದಕ್ಷಿಣ ಕನ್ನಡ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕಿ.!

25 Jun 2025
ಕರಾವಳಿ

ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕಿ

ಕೃಷ್ಣವೇಣಿಯನ್ನು ರಾಜ್ಯ ಸರ್ಕಾರ ಅಮಾನತು ಮಾಡಿದೆ. ಈ ಕುರಿತು ವಿಜಯ ಕರ್ನಾಟಕದಲ್ಲಿ ತನಿಖಾ ವರದಿ ಪ್ರಕಟವಾಗಿತ್ತು.


ಸಾರ್ವಜನಿಕ ವಲಯದಲ್ಲಿ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಇದೀಗ ಕೃಷ್ಣವೇಣಿ ಸ್ಥಾನಕ್ಕೆ ಸಂದೀಪ್‌ ಜಿ.ಯು. ಅವರನ್ನು ನಿಯೋಜಿಸಲಾಗಿದೆ.


50 ಸಾವಿರ ರೂ. ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಂಧನಕ್ಕೊಳಗಾಗಿದ್ದ ದಕ್ಷಿಣ ಕನ್ನಡ ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ, ಹಿರಿಯ ಭೂವಿಜ್ಞಾನಿ ಕೃಷ್ಣವೇಣಿಯನ್ನು ಅಮಾನತುಗೊಳಿಸಿ ರಾಜ್ಯ ಸರಕಾರದ ಅಧೀನ ಕಾರ್ಯದರ್ಶಿ ಶನಿವಾರ ಮಹತ್ವದ ಆದೇಶ ಹೊರಡಿಸಿದ್ದಾರೆ.


ಜಾಗದ ವಿಚಾರಕ್ಕೆ ಸಂಬಂಧಿಸಿ 2025ರ ಮೇ 28ರಂದು ಲಂಚದ ಹಣ ಪಡೆಯುತ್ತಿದ್ದಾಗ ಕೃಷ್ಣ ವೇಣಿಯನ್ನು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದರು. ಕೃಷ್ಣವೇಣಿ ಸುಮಾರು 18 ದಿನಗಳ ಕಾಲ ಜೈಲುವಾಸ ಅನುಭವಿಸಿದ್ದರು. ಈ ಅಧಿಕಾರಿಯನ್ನು ಅಮಾನತುಗೊಳಿಸುವಂತೆ ಗಣಿ ಇಲಾಖೆ ನಿರ್ದೇಶಕರು ಸರಕಾರಕ್ಕೆ ಶಿಫಾರಸು ಮಾಡಿದ್ದರು. ಈ ಮಧ್ಯೆ ಆರೋಪಿಯು ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಿ, ಆ ಮೂಲಕ ಜಾಮೀನು ಪಡೆದಿದ್ದರು. ಇದಾದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಅದೇ ಹುದ್ದೆಯಲ್ಲಿ ಮುಂದುವರೆದಿದ್ದರು.


ಗಣಿ ಇಲಾಖೆ ಅಧಿಕಾರಿ ಕೃಷ್ಣವೇಣಿ ಅದೇ ಹುದ್ದೆಯಲ್ಲಿ ಮುಂದುವರಿದಿರುವ ಬಗ್ಗೆ ಮಾಧ್ಯಮದ ವರದಿಯನ್ನು ಗಂಭೀರವಾಗಿ ಪರಿಗಣಿಸಿದ ದಕ್ಷಿಣ ಕನ್ನಡ ಜಿಲ್ಲಾಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅಧಿಕಾರಿಯನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಿ, ಸೂಕ್ತ ಶಿಸ್ತು ಕ್ರಮ ಕೈಗೊಳ್ಳುವಂತೆ ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು.


ಕೃಷ್ಣವೇಣಿ ವಿರುದ್ಧ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ, ಮೇ 28ರಿಂದ ಅನ್ವಯವಾಗುವಂತೆ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ನಿಯಮ 10 (2)(ಎ)ರನ್ವಯ ಸರಕಾರಿ ಸೇವೆಯಿಂದ ಅಮಾನತುಗೊಳಿಸಿ ಸರಕಾರದ ಅಧೀನ ಕಾರ್ಯದರ್ಶಿ ಮಂಜುನಾಥ ಎಚ್‌.ಎಂ. ಆದೇಶಿಸಿದ್ದಾರೆ.


ದಕ್ಷಿಣ ಕನ್ನಡ ಗಣಿ ಮತ್ತು ಭೂವಿಜ್ಞಾನ ಇಲಾಖೆ ಇಲಾಖೆ ಉಪನಿರ್ದೇಶಕಿ ಕೃಷ್ಣವೇಣಿಯನ್ನು ರಾಜ್ಯ ಸರಕಾರ ಅಮಾನತುಗೊಳಿಸಿದ್ದು, ಅವರ ಸ್ಥಾನಕ್ಕೆ ಉಡುಪಿ ಹಿರಿಯ ಭೂವಿಜ್ಞಾನಿ ಸಂದೀಪ್‌ ಜಿ.ಯು. ಅವರನ್ನು ಕರ್ನಾಟಕ ನಾಗರಿಕ ಸೇವಾ ನಿಯಮ-68ರಡಿ ನಿಯುಕ್ತಿಗೊಳಿಸಿ ರಾಜ್ಯ ಸರಕಾರದ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಅಧೀನ ಕಾರ್ಯದರ್ಶಿ ಮಂಜುನಾಥ್‌ ಎಚ್‌. ಆದೇಶಿಸಿದ್ದಾರೆ.

Recently Updated:

ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..
ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!
ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.*  ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ    *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.* ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.* ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.*
ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.
ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..
ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್. ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್.