ರಾಷ್ಟಿಯ ಹೆದ್ದಾರಿ -75ರಲ್ಲಿ ಸಕಲೇಶಪುರ ವ್ಯಾಪ್ತಿಯ ಭೂಕುಸಿತ ಉಂಟಾಗಬಹುದಾದ 12 ಸ್ಥಳಗಳನ್ನು ಜಿಲ್ಲಾಧಿಕಾರಿ ಪರಿಶೀಲಿಸಿ ಗುರುತಿಸಲಾಗಿದ್ದು, ವೈಜ್ಞಾನಿಕವಾಗಿ ಭೂ ಕುಸಿತ ತಡೆಯಲು ಈಗಾಗಲೇ ವರದಿ ಸಿದ್ದಪಡಿಸಲಾಗಿದೆ ಮಳೆಗಾಲ ಮುಗಿದ ನಂತರ ಕಾಮಗಾರಿ ಪ್ರಾರಂಭಿಸಿಲಾಗುವುದು ಎಂದು ರಾಷ್ಟೀಯ ಹೆದ್ದಾರಿಯ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ ಎಸ್ ಲತಾ ಕುಮಾರಿ ಅವರು ತಿಳಿಸಿದ್ದಾರೆ.
ಸಕಲೇಶಪುರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆಗೋಡೆ ಕುಸಿತವಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದ ಜಿಲ್ಲಾಧಿಕಾರಿ ಈಗಾಗಲೇ ಮಳೆಗಾಲ ಎದುರಿಸಲು ಸಂಬಂಧಿಸಿದಂತೆ ಸಭೆಯನ್ನು ನಡೆಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಕಂದಾಯ ಹಾಗೂ ಮತ್ತಿತರರ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.
ಶಾಲಾ ಶಿಕ್ಷಣ ಇಲಾಖೆಯೂ ಮಕ್ಕಳ ಸುರಕ್ಷತೆ ಹೆಚ್ಚಿನ ಆದ್ಯತೆ ನೀಡಬೇಕು ಈ ನಿಟ್ಟಿನಲ್ಲಿ ಕಳೆದ 2 ದಿನ ರಜೆ ನೀಡಲಾಗಿತ್ತು ಎಂದ ಅವರ ಜಿಲ್ಲಾ ವಿಪತ್ತು ನಿರ್ವಹಣಾ ಘಟಕ ಅತ್ಯಂತ ಕ್ರಿಯಾಶೀಲವಾಗಿರುವಂತೆ ಹಾಗೂ ಎಂತಹ ಗಂಭೀರ ಪರಿಸ್ಥಿತಿಯನ್ನು ಎದುರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ಈ ವೇಳೆಯಲ್ಲಿ ಉಪವಿಭಾಗಾಧಿಕಾರಿ ಶೃತಿ ಹಾಗೂ ತಹಶೀಲ್ದಾರ್ ಅರವಿಂದ್, ರಾಷ್ಟಿಯ ಹೆದ್ದಾರಿ ಅಧಿಕಾರಿ
ಹಾಸನ ವರದಿ
ಶಂಕ್ರ ಗೌಡ ಹುಲಿಕೆರೆ








